ಬೆAಗಳೂರು: ಬಾಗಲಕೋಟೆ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚಾರಕ್ಕೆ ಎಂಟ್ರಿಯಾಗಲಿದ್ದಾರೆ. ಯತ್ನಾಳ್ ಅವರು ಪ್ರಚಾರ ಮಾಡಲು ಮಾಜಿ ಸಿಎಂ ಯಡಿಯೂರಪ್ಪ ಗ್ರೀನ್‌ಸಿಗ್ನಲ್ ಕೊಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಾತಾಡಿದ ಮಾಜಿ ಸಿಎಂ ಯಡಿಯೂರಪ್ಪ, ಯಾರೇ ಬಂದರೂ ಪ್ರಚಾರ ನಡೆಸಲು ಅವಕಾಶ ಇದೆ. ಅವರು ಪ್ರಚಾರಕ್ಕೆ ಬರಲಿ, ಸ್ವಾಗತ ಮಾಡುತ್ತೇವೆ ಎಂದರು. ಈ ವೇಳೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಡೀ ಸರ್ಕಾರವೇ ಉಪಚುನಾವಣೆ ಪ್ರಚಾರದಲ್ಲಿದೆ. ಸ್ವತಃ ಸಿಎಂ ಅವರೇ ನಾಲ್ಕೈದು ದಿನ ಅಲ್ಲಿ ಹೋಗಿ ಕೂತಿದ್ದಾರೆ. ಅದರರ್ಥ ಚುನಾವಣಾ ಸೋಲಿನ ಭಯ ಅವರಿಗೆ ಕಾಡುತ್ತಿದೆ ಎನ್ನುವುದು ಸ್ಪಷ್ಟ ಎಂದು ಹೇಳಿದರು.
ಇಂದಿನಿAದ ನಾನು ಪ್ರಚಾರ ನಡೆಸುತ್ತೇನೆ. ಎರಡೂ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ದೊಡ್ಡ ಅಂತರದಿAದ ಗೆಲ್ಲುತ್ತಾರೆ ಎನ್ನುವುದಕ್ಕೆ ನೂರಕ್ಕೆ ನೂರು ವಿಶ್ವಾಸವಿದೆ ಎಂದರು. ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದ್ದು ಸಿದ್ದರಾಮಯ್ಯ ಜನಹಿತ ಮರೆತು ತುಘಲಕ್ ದರ್ಬಾರ್ ನಡೆಸ್ತಿದ್ದಾರೆ. ಅಜೀರ್ಣವಾಗುವಷ್ಟು ಬಹುಮತ ಕಾಂಗ್ರೆಸ್ ಗೆ ಈಗಾಗಲೇ ಇದೆ. ಮತ್ತೊಮ್ಮೆ ಚುನಾವಣೆ ಗೆದ್ದರೆ ಅಧಿಕಾರ ಮದದಿಂದ ಇನ್ನೂ ಹೆಚ್ಚು ಭ್ರಷ್ಟಾಚಾರಕ್ಕೆ ಅವಕಾಶ ಕೊಟ್ಟಂತೆ ಆಗುತ್ತದೆ ಅಂತ ಕಿಡಿ ಕಾರಿದರು.
