Ad image

ಡಿವೈಡರ್‌ಗೆ ಡಿಕ್ಕಿ ಹೊಡೆದ ಆಂಧ್ರ ಸಾರಿಗೆ ಬಸ್ – ಪ್ರಯಾಣಿಕರು ಸೇಫ್

Team SanjeMugilu
0 Min Read

ಬೆಂಗಳೂರು: ವೇಗವಾಗಿ ಬಂದ ಆಂಧ್ರ ಸಾರಿಗೆ ಬಸ್ ಡಿವೈಡರ್‌ಗೆ  ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ ಘಟನೆ ಬೆಂಗಳೂರಿನ  ಶಿವಾನಂದ ಸರ್ಕಲ್  ಬಳಿ ನಡೆದಿದೆ.

ಅಧೋನಿಯಿಂದ ಅನಂತಪುರ ಮೂಲಕ ಬೆಂಗಳೂರಿಗೆ ಬರುತ್ತಿದ್ದ ಬಸ್ ಬೆಳಗಿನ ಜಾವ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬಸ್ಸಿನ ಮುಂಭಾಗದ ಚಕ್ರ ಹಾಗೂ ಎಂಜಿನ್ ಕಿತ್ತು ಹೊರಬಂದಿದೆ.

ಅದೃಷ್ಟವಶಾತ್ ಅಪಘಾತದಲ್ಲಿ ಪ್ರಯಾಣಿಕರು ಸೇಫ್ ಆಗಿದ್ದು, ಯಾವುದೇ ಪ್ರಾಣಹಾನಿಯಾಗಿಲ್ಲ. ಸದ್ಯ ಹೈಗ್ರೌಂಡ್ಸ್ ಪೊಲೀಸರು ಡಿವೈಡರ್‌ಗೆ ಸಿಲುಕಿರುವ ಬಸ್ ಹೊರಗೆಳೆಯಲು ಪ್ರಯತ್ನಿಸುತ್ತಿದ್ದಾರೆ.

Share This Article