ನವದೆಹಲಿ: ಗಡಿ ಉದ್ವಿಗ್ನತೆಯ ನಡುವೆ ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಭಾರತಕ್ಕೆ ಬಹಿರಂಗ ಬೆದರಿಕೆಯೊಡ್ಡಿದ್ದಾರೆ.
ಮುಂದಿನ ಬಾರಿ ಉಭಯ ರಾಷ್ಟ್ರಗಳ ನಡುವೆ ಸಂಘರ್ಷ ನಡೆದರೆ ಅದು ಕೇವಲ 200-250 ಕಿಮೀ ಗೆ ಸೀಮಿತವಾಗಿರುವುದಿಲ್ಲ. ನಾವು ಭಾರತದ ಗಡಿಯೊಳಗೆ ನುಗ್ಗಿ, ಅವರ ಮನೆಗಳೊಳಗೆ ಹಾಗೂ ಆರ್‌ಎಸ್‌ಎಸ್ ಶಿಬಿರಗಳ ಮೇಲೆ ದಾಳಿ ಮಾಡುತ್ತೇವೆ ಎಂದಿದ್ದಾರೆ.
ಪಾಕಿಸ್ತಾನವು ಗಡಿಯಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈಹಾಕಿದರೆ ಹಿಂದೆಂದೂ ಕಾಣದ ರೀತಿಯಲ್ಲಿ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಭಾರತದ ರಕ್ಷಣಾ ಸಚಿವ ರಾಜನಾಥ ಸಿಂಗ್ ಗುರುವಾರ ಖಡಕ್ ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಆಸಿಫ್ ಈ ಹೇಳಿಕೆ ನೀಡಿದ್ದಾರೆ. ಇದಕ್ಕೂ ಮುನ್ನ, ಅಮೆರಿಕ ಪಾಕ್ ಮೇಲೆ ದಾಳಿ ಮಾಡಿದರೂ ದೆಹಲಿ-ಮುಂಬೈ ನಗರಗಳ ಮೇಲೆ ದಾಳಿ ನಡೆಸುವುದಾಗಿ ಪಾಕಿಸ್ತಾನದ ಮಾಜಿ ರಾಯಭಾರಿ ಅಬ್ದುಲ್ ಬಾಸಿತ್ ಕೂಡ ವಿವಾದಾತ್ಮಕ ಹೇಳಿಕೆ ನೀಡಿದ್ದರು.
