Ad image

ಬೈಕ್‌ಗೆ ಗೂಡ್ಸ್ ವಾಹನ ಡಿಕ್ಕಿ – ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ದುರ್ಮರಣ

Team SanjeMugilu
1 Min Read

ಬಳ್ಳಾರಿ: ಬೈಕ್‌ಗೆ ಹಿಂಬದಿಯಿಂದ ಗೂಡ್ಸ್ ವಾಹನ  ಡಿಕ್ಕಿ ಹೊಡೆದ ಪರಿಣಾಮ ಅರಣ್ಯ ಇಲಾಖೆಯ ಇಬ್ಬರು ವಾಚರ್ಸ್ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ನಡೆದಿದೆ.

ಕಮಲಾಪುರದ ಕೃಷ್ಣ (26), ವೆಂಕಟಾಪುರದ ಹನುಮಂತಪ್ಪ (50) ಸಾವನ್ನಪ್ಪಿದ ಅರಣ್ಯ ಇಲಾಖೆ ಕಾವಲುಗಾರರು. ಹೊರಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದ ಅರಣ್ಯ ಇಲಾಖೆ ವಾಚರ್ಸ್ ಕೆಲಸ ಮಾಡುತ್ತಿದ್ದರು. ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತದ ಬಳಿಕ ಎಸ್ಕೇಪ್ ಆಗುತ್ತಿದ್ದ ಬುಲೇರೋ ಗೂಡ್ಸ್ ವಾಹನವನ್ನು ಹಿಡಿದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಹಂಪಿ ಸಿಪಿಐ ರಾಜೇಶ್ ಭಟಗುರ್ಕಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article