Ad image

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Team SanjeMugilu
1 Min Read

ಚಿತ್ರದುರ್ಗ: ಚಿತ್ರದುರ್ಗದಲ್ಲಿ  ಭ್ರಷ್ಟ ಅಧಿಕಾರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ  ಅಧಿಕಾರಿಗಳು ಬಿಸಿಮುಟ್ಟಿಸಿದ್ದಾರೆ. ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಮಾಜಿ ಅಕೌಂಟೆಂಟ್ ಸುಶೀಲಮ್ಮ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಶೀಲಮ್ಮ ವರ್ಷದ ಹಿಂದೆ ವಿಆರ್‌ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿದ್ದ ವೇಳೆ ಸುಶೀಲಮ್ಮ ಭ್ರಷ್ಟಾಚಾರ ಮಾಡಿದ್ದು, ಆದಾಯ ಮೀರಿ ಹಣ, ಆಸ್ತಿ ಗಳಿಕೆ ಆರೋಪ ಕೇಳಿಬಂದಿದೆ.

ಈ ಹಿನ್ನೆಲೆ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದ ಮೆದೇಹಳ್ಳಿ ಬಡಾವಣೆಯ ಮನೆ, ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆ ಮೇಲೆ ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

Share This Article