Ad image

ಅನೈತಿಕ ಸಂಬಂಧಕ್ಕೆ ಅಡ್ಡಿ – ಪ್ರೇಯಸಿಯ ಪತಿಯ ಹತ್ಯೆ

Team SanjeMugilu
1 Min Read

ಬೆಂಗಳೂರು: ಅನೈತಿಕ ಸಂಬಂಧಕ್ಕೆ  ಅಡ್ಡಿಯಾದ ಪ್ರೇಯಸಿಯ ಪತಿಯನ್ನು  ಪ್ರಿಯಕರ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ  ನಡೆದಿದೆ.

ಸುನೀಲ್ ನಾಯಕ್ ಕೊಲೆಯಾದ ಪತಿ. ಪ್ರಿಯಕರ ಬಸುದೇವ್ ಮಲ್ಲಿಕ್ ಈ ಕೃತ್ಯ ಎಸಗಿದ್ದಾನೆ. ಆರೋಪಿ ಬಸುದೇವ್ ಮಲ್ಲಿಕ್ ಸುನೀಲ್ ನಾಯಕ್ ಪತ್ನಿಯೊಂದಿಗೆ ಸಲುಗೆ ಹೊಂದಿದ್ದ. ಈ ವಿಚಾರ ತಿಳಿದು ಸುನೀಲ್ ನಾಯಕ್ ಗಲಾಟೆ ಮಾಡಿದ್ದ. ಇದರಿಂದ ಕೋಪಗೊಂಡ ಆರೋಪಿ ಬಸುದೇವ್ ನಾಯಕ್ ಮದ್ಯಪಾನ ಮಾಡುವ ನೆಪದಲ್ಲಿ ಒಟ್ಟಿಗೆ ಸೇರಿ ಕಂಠಪೂರ್ತಿ ಕುಡಿಸಿ ಸುನೀಲ್ ನಾಯಕ್‌ನನ್ನ ಕೊಲೆ ಮಾಡಿದ್ದ.

ಕೊಲೆ ಬಳಿಕ ಮೃತದೇಹವನ್ನು ಮೂಟೆಯಲ್ಲಿ ಹಾಕಿ ಬೊಮ್ಮಸಂದ್ರದ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ. ಈ ಸಂಬಂಧ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಆರೋಪಿ ಬಸುದೇವ್ ಮಲ್ಲಿಕ್‌ನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

Share This Article