Ad image

ಶಾಂತಿ ಮಾತುಕತೆ ಮಧ್ಯೆ ಪಾಕ್‌, ಇಸ್ರೇಲ್‌ ಮಧ್ಯೆ ಭಯಂಕರ ಕಿತ್ತಾಟ

Team SanjeMugilu
1 Min Read

ಇಸ್ಲಾಮಾಬಾದ್‌/ಟೆಲ್‌ ಅವೀವ್‌: ಅಮೆರಿಕ-ಇರಾನ್‌ ಮಧ್ಯೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಇಸ್ಲಾಮಾಬಾದಿನಲ್ಲಿ ಮಾತುಕತೆಗೆ ವೇದಿಕೆ ಸಿದ್ಧವಾಗುತ್ತಿರುವ ಸಮಯದಲ್ಲೇ ಪಾಕಿಸ್ತಾನ ಮತ್ತು ಇಸ್ರೇಲ್‌ ಮಧ್ಯೆ ಕಿತ್ತಾಟ ತೀವ್ರಗೊಂಡಿದೆ.

ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್  ಅವರು ಇಸ್ರೇಲ್ ಲೆಬನಾನ್‌ನಲ್ಲಿ ಜನಾಂಗೀಯ ಹತ್ಯೆ ನಡೆಸುತ್ತಿದೆ. ಇಸ್ರೇಲನ್ನು ಕ್ಯಾನ್ಸರ್ ಕಾರಕ ದೇಶ, ಮಾನವೀಯತೆಗೆ ಶಾಪ ಎಂದು ಕರೆದಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಪ್ರಕಟಿಸಿದ ಅವರು, ಯೂರೋಪಿನ ಯಹೂದಿಗಳಿಂದ ಮುಕ್ತಿ ಪಡೆಯಲು ಪ್ಯಾಲೆಸ್ಟೈನ್ ಭೂಮಿಯಲ್ಲಿ ಈ ಕ್ಯಾನ್ಸರ್ ಅನ್ನು ಸೃಷ್ಟಿಸಿದವರು ನರಕದಲ್ಲಿ ಬೆಂದು ಹೋಗಲಿ ಎಂದು ಶಾಪ ಹಾಕಿದ್ದಾರೆ. ಗಾಜಾದ ನಂತರ ಈಗ ಇರಾನ್ ಮತ್ತು ಲೆಬನಾನ್ ಮೇಲೆ ಇಸ್ರೇಲ್ ದಾಳಿ ನಡೆಸುತ್ತಿದ್ದು, ರಕ್ತಪಾತವು ನಿರಂತರವಾಗಿ ಮುಂದುವರಿಯುತ್ತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖವಾಜಾ ಆಸಿಫ್ ಹೇಳಿಕೆಯನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಕಚೇರಿ ಮತ್ತು ವಿದೇಶಾಂಗ ಸಚಿವ ಗಿಡಿಯಾನ್ ಸಾರ್ ತೀವ್ರವಾಗಿ ಖಂಡಿಸಿದ್ದಾರೆ. ಇದನ್ನು ಅಸಭ್ಯ, ಅಪಮಾನಕಾರಿ ಮತ್ತು ಯಹೂದಿ ವಿರೋಧಿ ಹೇಳಿಕೆ ಎಂದು ಕರೆದಿದೆ. ಶಾಂತಿ ಮಾತುಕತೆ ನಡೆಸುವ ದೇಶದ ಜವಾಬ್ದಾರಿಯುತ ಸಚಿವರು ಇಂತಹ ಭಾಷೆ ಬಳಸುವುದು ಸರಿಯಲ್ಲ ಎಂದು ಟೀಕಿಸಿದೆ.

ಖವಾಜಾ ಆಸಿಫ್ ಇಸ್ರೇಲ್‌ ವಿರುದ್ಧ ಸಿಟ್ಟು ಹೊರಹಾಕುವುದು ಇದೇ ಮೊದಲೆನಲ್ಲ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಮಾನವಕುಲದ ಅತ್ಯಂತ ದೊಡ್ಡ ಅಪರಾಧಿ. ಅಮೆರಿಕ ವೆನೆಜುವೆಲಾದ ಅಧ್ಯಕ್ಷರನ್ನು ಸೆರೆಹಿಡಿದಂತೆಯೇ ನೆತನ್ಯಾಹು ಅವರನ್ನು ಅಪಹರಿಸಿ ಅಂತರಾಷ್ಟ್ರೀಯ ನ್ಯಾಯಾಲಯಕ್ಕೆ ಒಪ್ಪಿಸಬೇಕು ಎಂದು ಅವರು ಈ ಹಿಂದೆ ಆಗ್ರಹಿಸಿದ್ದರು.

Share This Article