Ad image

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ – ಮೂವರು ಅರೆಸ್ಟ್, ಓರ್ವ ಮಹಿಳೆಯ ರಕ್ಷಣೆ

Team SanjeMugilu
1 Min Read

ರಾಯಚೂರು: ಜಿಲ್ಲೆಯ ಸಿಂಧನೂರಿನಲ್ಲಿ  ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ದಾಳಿ ವೇಳೆ ಓರ್ವ ಮಹಿಳೆಯನ್ನ ರಕ್ಷಣೆ ಮಾಡಿದ್ದಾರೆ.

ಬಂಧಿತ ಆರೋಪಿಗಳನ್ನು ಗಂಗಾಧರ, ಶಾಮಣ್ಣ, ವಿಜಯಕುಮಾರ ಎಂದು ಗುರುತಿಸಲಾಗಿದೆ. ಪ್ರಮುಖ ಆರೋಪಿ ಅಭಿಷೇಕ ಪರಾರಿಯಾಗಿದ್ದಾನೆ. ನಗರದ ಹೊರವಲಯದ ನ್ಯಾಷನಲ್ ಲೇಔಟ್‌ನ ಮನೆಯೊಂದರಲ್ಲಿ ದಂಧೆ ನಡೆಯುತ್ತಿರುವ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. ವೇಶ್ಯಾವಾಟಿಕೆ ನಡೆಸುತ್ತಿದ್ದ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ದಾಳಿ ವೇಳೆ ಮೂವರು ಆರೋಪಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಮನಗರ ಮೂಲದ ಸಂತ್ರಸ್ತ ಮಹಿಳೆಯನ್ನ ರಕ್ಷಿಸಲಾಗಿದೆ.

ಇದಕ್ಕಾಗಿಯೇ ಮನೆಯನ್ನ ಬಾಡಿಗೆ ಪಡೆದಿದ್ದು, ಕೆಲಸ ಕೊಡಿಸುವುದಾಗಿ ನಂಬಿಸಿ ಅಮಾಯಕ ಹೆಣ್ಣುಮಕ್ಕಳನ್ನ ದಂಧೆಗೆ ಬಳಸುತ್ತಿದ್ದ ಎನ್ನಲಾಗಿದೆ. ಸದ್ಯ ಆರೋಪಿ ಅಭಿಷೇಕ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article