Ad image

ಕನ್ನಡ ಸಾಹಿತ್ಯ ಲೋಕದ ಅಕ್ಷರ ಮಾಂತ್ರಿಕ ಎಸ್‌ಎಲ್‌ ಭೈರಪ್ಪ ಇನ್ನಿಲ್ಲ

Team SanjeMugilu
1 Min Read
ಬೆಂಗಳೂರು: ಸರಸ್ವತಿ ಸಮ್ಮಾನ್‌ ಪುರಸ್ಕೃತ ಸಾಹಿತಿ ಎಸ್‌ಎಲ್‌ ಭೈರಪ್ಪ ವಿಧಿವಶರಾಗಿದ್ದಾರೆ. ಬೆಂಗಳೂರಿನ ರಾಜರಾಜೇಶ್ವರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಭೈರಪ್ಪನವರು (84)  ಹೃದಯಸ್ತಂಭನದಿಂದ  ಮಧ್ಯಾಹ್ನ 2:30ಕ್ಕೆ  ನಿಧನರಾದರು.

ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್‌  ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.

ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಸಂತೇಶಿವರದಲ್ಲಿ ಆಗಸ್ಟ್‌ 20, 1931 ಜನಿಸಿದ ಭೈರಪ್ಪನವರು ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲೇ ಪಡೆದರು.

ಪ್ರೌಢ ಶಿಕ್ಷಣ ಹಾಗೂ ಕಾಲೇಜು ಓದು ಮೈಸೂರಿನಲ್ಲಿ ಮುಂದುವರೆಸಿದ ಭೈರಪ್ಪನವರು ಎಂ.ಎ.ನಲ್ಲಿ ಸುವರ್ಣ ಪದಕದೊಂದಿಗೆ ತೇರ್ಗಡೆಯಾದರು. ಬರೋಡಾದ ಮಹಾರಾಜ ಸಯ್ಯಾಜಿರಾವ್ ವಿಶ್ವವಿದ್ಯಾಲಯದಿಂದ “ಸತ್ಯ ಮತ್ತು ಸೌಂದರ್ಯ” ಎಂಬ ಇಂಗ್ಲಿಷ್‌ನಲ್ಲಿ ರಚಿಸಿದ ಮಹಾ ಪ್ರಬಂಧಕ್ಕಾಗಿ ಡಾಕ್ಟರೇಟ್ ಪದವಿ ಪಡೆದಿದ್ದಾರೆ.

ಆಯಾ ಕಾಲದಲ್ಲಿ ಬಂದ ಅವರ ಕಾದಂಬರಿಗಳೆಲ್ಲಾ ಚರ್ಚೆಗೆ ಒಳಗಾಗಿವೆ. ಇಂಗ್ಲಿಷ್ ಭಾಷೆಯೂ ಸೇರಿದಂತೆ ಭಾರತೀಯ ಹಲವು ಭಾಷೆಗಳಿಗೆ ಭೈರಪ್ಪನವರ ಕಾದಂಬರಿಗಳು ಅನುವಾದಗೊಂಡಿವೆ. ಗೃಹಭಂಗ, ವಂಶವೃಕ್ಷ, ನೆಲೆ, ಸಾಕ್ಷಿ, ನಾಯಿ ನೆರಳು, ತಬ್ಬಲಿಯು ನೀನಾದೆ ಮಗನೆ, ದಾಟು, ಧರ್ಮಶ್ರೀ, ಪರ್ವ, ಭಿತ್ತಿ ಮುಂತಾದವು ಹಿಂದಿ, ಮರಾಠಿಯಲ್ಲಿ ಜನಪ್ರಿಯವಾಗಿವೆ.

Share This Article