ಎಕ್ಸ್ ಖಾತೆಯಲ್ಲಿ ಟ್ವೀಟ್ ಹಂಚಿಕೊಂಡಿರುವ ಅವರು, ತಮ್ಮ ಅಕ್ಷರಗಳಿಂದ ನಮ್ಮ ಆತ್ಮವನ್ನು ಕಲಕಿ, ಇಡೀ ಭಾರತವನ್ನು ಅಧ್ಯಯನ ಮಾಡಿದ್ದ ಒಬ್ಬ ಮಹಾನ್ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದರು. ಅವರ ಬರಹಗಳು ಇಂದಿನ ಪೀಳಿಗೆಯ ಮೇಲೆ ಪ್ರಭಾವ ಬೀರಿದ್ದವು.
ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರು ಹೊಂದಿದ್ದ ಉತ್ಸಾಹವು ಮುಂದಿನ ಯುವಮನಸ್ಸುಗಳನ್ನು ಪ್ರೇರೇಪಿಸುತ್ತಲೇ ಇರುತ್ತದೆ. ಈ ಸಂದರ್ಭದಲ್ಲಿ ದೇವರು ಅವರ ಕುಟುಂಬಸ್ಥರಿಗೆ ನೋವನ್ನು ಸಹಿಸಿಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಅವರ ಜೊತೆಗಿದ್ದ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ.
ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲಿಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರು ಪಡೆದಿದೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಇವರಿಗೆ ಭಾರತ ಸರ್ಕಾರವು 2023ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ