Ad image

ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

Team SanjeMugilu
1 Min Read

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾಯಿ  ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಗುಂಟೆ ಬಳಿಯ ಭುವನೇಶ್ವರಿ ನಗರದಲ್ಲಿ ನಡೆದಿದೆ.

ಭುವನ್ (1), ಬೃಂದಾ (4), ತಾಯಿ ವಿಜಯಲಕ್ಷ್ಮಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗುರುವಾರ ರಾತ್ರಿ ವಿಜಯಲಕ್ಷ್ಮಿ ತಂಗಿ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.

ಮೂಲತಃ ರಾಯಚೂರು ಮಸ್ಕಿ ಮೂಲದ ರಮೇಶ್, ವಿಜಯಲಕ್ಷ್ಮಿ ಮದುವೆಯಾಗಿ ಐದು ವರ್ಷವಾಗಿತ್ತು. ಕೌಟುಂಬಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಪತಿ ರಮೇಶ್ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದರು. ಸಾವಿನ ಬಗ್ಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಬಾಗಲಗುಂಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ವಿಜಯಲಕ್ಷ್ಮಿ ಆತ್ಮಹತ್ಯೆಗೆ ಪತಿಯೇ ಕಾರಣ ಎಂದು ಸಂಬಂಧಿಕರು ದೂರಿದ್ದಾರೆ. ರಮೇಶ್‌ ಮತ್ತೊಂದು ಮದುವೆಯಾಗಿದ್ದು ಡಿವೋರ್ಸ್ ಕೊಡುವಂತೆ ಪತ್ನಿಗೆ ಬೆದರಿಕೆ ಹಾಕುತ್ತಿದ್ದ. ಹೀಗಾಗಿ ಪದೇ ಪದೇ ಕುಟುಂಬದಲ್ಲಿ ಜಗಳ ನಡೆಯುತ್ತಿತ್ತು. ಈ ವಿಚಾರ ಕುಟುಂಬಸ್ಥರ ಬಳಿ ವಿಜಯಲಕ್ಷ್ಮಿ ಹೇಳಿದ್ದಳು. ಈತನ ಹಿಂಸೆಯಿಂದ ಬೇಸತ್ತು ವಿಜಯಲಕ್ಷ್ಮಿ ತನ್ನ ಮಕ್ಕಳನ್ನ ಕೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಆರೋಪಿಸಿದ್ದಾರೆ.

Share This Article