ಮೈಸೂರು : ಐದು ವರ್ಷ ನಮ್ಮ ತಂದೆ ಸಿದ್ದರಾಮಯ್ಯ ಸಿಎಂ ಆಗಿ ಇರಬೇಕು. ಆಗ ರಾಜ್ಯಕ್ಕೆ ಒಳ್ಳೆಯದಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೆಂಬರ್ ಕ್ರಾಂತಿ ವಿಚಾರ ನನಗೆ ಗೊತ್ತಿಲ್ಲ. ತಂದೆಯವರು ಕೊಟ್ಟಿರುವ ಮಾಹಿತಿ ಪ್ರಕಾರ ಹೈಕಮಾಂಡ್ ಆಗ್ಲಿ ಬೇರೆ ನಾಯಕರಾಗಲಿ ಯಾರು ಕೂಡ ನವೆಂಬರ್ ಆದ ಮೇಲೆ ಅಧಿಕಾರ ಬಿಡಿ ಎಂದು ಹೇಳಿಲ್ಲ. ಹೀಗಾಗಿ ಇವರೆಲ್ಲಾ ಯಾವ ಕ್ರಾಂತಿ ಬಗ್ಗೆ ಮಾತನಾಡುತ್ತಿದ್ದಾರೆ ನನಗೆ ಗೊತ್ತಿಲ್ಲ ಎಂದರು.
ರಾಜಕೀಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಈಗಿನ ಪರಿಸ್ಥಿತಿ ನೋಡಿದರೆ ನಮ್ಮ ತಂದೆ 5 ವರ್ಷ ಸಿಎಂ ಆಗಿ ಇರುತ್ತಾರೆ. ಸಿದ್ದರಾಮಯ್ಯ ಅವರಿಗೆ ಶಾಸಕರ ಬೆಂಬಲ ಇದೆ. ಇಲ್ಲ ಅಂದಿದ್ದರೆ ಶಾಸಕರು ಸುಮ್ಮನೆ ಇರುತ್ತಿರಲಿಲ್ಲ. ಹೈಕಮಾಂಡ್ ಹೋಗಿ ದೂರು ಕೊಡುತ್ತಿದ್ದರು ಎಂದರು. ಸಂಪುಟ ಪುನಾರಚನೆ ಬಗ್ಗೆ ತಂದೆಯ ಜೊತೆ ಚರ್ಚೆ ಮಾಡಿಲ್ಲ. ತಂದೆಯೇ ಡಿಸೆಂಬರ್ ನಲ್ಲಿ ಸಂಪುಟ ಪುನಾರಚನೆ ಮಾಡುವುದಾಗಿ ಹೇಳಿದ್ದಾರೆ. ಜಿಬಿಎ ಸಭೆಗೆ ಹೋಗಿದ್ದೇ. ಗ್ರೇಟರ್ ಬೆಂಗಳೂರು ಬಗ್ಗೆ ಸಾಕಷ್ಟು ಮಾಹಿತಿ ಕೊಟ್ಟರು. ನಾನು ಪರಿಷತ್ ಸ್ಥಾನಕ್ಕೆ ನಾನು ಬೆಂಗಳೂರು ವಿಳಾಸ ಕೊಟ್ಟಿದ್ದೇನೆ. ಹೀಗಾಗಿ ನಾನು ಸದಸ್ಯನಾಗಿದ್ದೇನೆ. ನಾನು ವರುಣ ಕ್ಷೇತ್ರದ ಮತದಾರ ಎಂದರು.
ಬೆಂಗಳೂರು ಅಭಿವೃದ್ಧಿ ದೊಡ್ಡ ಸವಾಲಾಗಿದೆ. ಒಳ್ಳೆಯ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ. ಇದು ನಿರಂತರ ಪ್ರಕ್ರಿಯೆ. ಐಟಿ ವ್ಯಕ್ತಿಗಳ ಟ್ವೀಟ್ ಅನ್ನು ನಮ್ಮ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಒಂದು ಸಾವಿರ ಕೋಟಿ ಹಣವನ್ನ ಸಿಎಂ ಬಿಡುಗಡೆ ಮಾಡಿದ್ದಾರೆ. ಸಿಟಿ ರೌಂಡ್ಸ್ ಕೂಡ ಮಾಡುತ್ತಿದ್ದಾರೆ. ಉಪ ಮುಖ್ಯಮಂತ್ರಿ 5 ಸಾವಿರ ಗುಂಡಿಗಳನ್ನು ಮುಚ್ಚಿರುವ ಬಗ್ಗೆ ಹೇಳಿದ್ದಾರೆ ಎಂದರು.
ಸಿದ್ದರಾಮಯ್ಯ ಮೇಲು ಎಂದು ಯತೀಂದ್ರ ಎಲ್ಲೂ ಹೇಳಿಲ್ವಲ: ಸಚಿವ ಮಹದೇವಪ್ಪ
ಸರ್ಕಾರ ತನ್ನ ಕೆಲಸ ಮಾಡುತ್ತಿದೆ: ಕೈಗಾರಿಕಾಕೋದ್ಯಮಿಗಳು ಸರ್ಕಾರವನ್ನ ಎಚ್ಚರಿಸುವ ಕೆಲಸ ಮಾಡಲಿ. ಆದರೆ ಕೆಲವರು ಹಿಪೋಕ್ರೇಟ್ಸ್ ಗಳು ಬಿಜೆಪಿ ಸರ್ಕಾರ ಏನ್ ತಪ್ಪು ಮಾಡಿದರು ಕಣ್ಮುಚ್ಚಿ ಕುಳಿತುಕೊಂಡಿರುತ್ತಾರೆ. ಆದರೆ ಕಾಂಗ್ರೆಸ್ ಸರ್ಕಾರ ಎಲ್ಲದಕ್ಕು ಸ್ಪಂದಿಸುತ್ತಿದೆ. ಕೆಲವರು ಸಣ್ಣ ತಪ್ಪುಗಳನ್ನ ದೊಡ್ಡದಾಗಿ ಬಿಂಬಿಸುವ ಕೆಲಸ ಮಾಡುತ್ತಿದ್ದಾರೆ. ಅದನ್ನು ಕಾಲ್ ಔಟ್ ಮಾಡುತ್ತೇವೆ ಎಂದು ಹೇಳಿದರು. ತಂದೆ ಸಿಎಂ ಆಗಿರುವ ತನಕ ನನ್ನನ್ನು ಮಂತ್ರಿ ಮಾಡಲ್ಲ ಎಂದು ಹೇಳಿದ್ದಾರೆ. ನಾನು ಕೂಡ ಅದನ್ನೇ ಹೇಳಿದ್ದೇನೆ ಎಂದರು.
ಪ್ರತಾಪ ಸಿಂಹ ಯಾರು?
ಪ್ರತಾಪ ಸಿಂಹ ಯಾರು? ಅವರನ್ನ ಅವರ ಪಕ್ಷದದವರೇ ಗಂಭೀರವಾಗಿ ತೆಗೆದುಕೊಂಡಿಲ್ಲ. ದಾರಿಯಲ್ಲಿ ಹೋಗುವವರೆಲ್ಲ ಪ್ರಶ್ನೆ ಮಾಡಿದ್ರೆ ಅದಕ್ಕೆ ಉತ್ತರ ಕೊಡಲು ಸಾಧ್ಯವಿಲ್ಲ ಎಂದರು.