ಬೆಳಗಾವಿ: ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿ ಮಾತನಾಡಿದ ಆರೋಪದ ಮೇಲೆ ಮಾಜಿ ಸಚಿವ ಉಮೇಶ್ ಕತ್ತಿ ಅವರ ಸಹೋದರ, ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ಕುರಿತಂತೆ ಮಾತನಾಡಿದ್ದ ರಮೇಶ್ ಕತ್ತಿ, ಜಾರಕಿಹೊಳಿ ಬ್ರದರ್ಸ್ ಪ್ರತಿನಿಧಿಸುವ ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಕತ್ತಿ ವಿರುದ್ಧ ಜಾತಿನಿಂದನೆ ಕೇಸ್ ದಾಖಲಾಗಿದ್ದು, ಎಫ್ಐಆರ್ ಕೂಡ ದಾಖಲಾಗಿದೆ.
ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನ
ಬೆಳಗಾವಿಯಲ್ಲಿ ವಾಲ್ಮೀಕಿ ಸಮುದಾಯದ ವಿರುದ್ಧ ರಮೇಶ್ ಕತ್ತಿ ನಾಲಿಗೆ ಹರಿಬಿಟ್ಟಿದ್ದಾರೆ. ವಾಲ್ಮೀಕಿ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರೋ ರಮೇಶ್ ಕತ್ತಿ, ವಾಲ್ಮೀಕಿ ಸಮಾಜದ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ.
ಸಚಿವ ಸತೀಶ್ ಜಾರಕಿಹೊಳಿ ಹೆಸರು ಹೇಳದೇ ಲಘು ಹೇಳಿಕೆ ಕೊಟ್ಟ ರಮೇಶ್ ಕತ್ತಿ, ಪೋನ್ ಮಾಡಿ ಹೇಳ್ತಾರೆ ಅಂತ ಅಶ್ಲೀಲವಾಗಿ ಬೈಯ್ದರು. ಮಾಜಿ ಶಾಸಕ ಮಹಾಂತೇಶ ದೊಡ್ಡಗೌಡರ ಸೇರಿ ಹಲವು ನಾಯಕರ ಮುಂದೆ ಅಶ್ಲೀಲ ಪದ ಬಳಕೆ ಮಾಡಿದ್ದಾರಂತೆ.
ಡಿಸಿಸಿ ಬ್ಯಾಂಕ್ ಚುನಾವಣೆ ನಡೆಯುವ ಬಿಕೆ ಮಾಡಲ್ ಶಾಲೆ ಆವರಣದಲ್ಲಿ ವಾಲ್ಮೀಕಿ ಸಮಾಜದ ವಿರುದ್ಧ ಕತ್ತಿ ಹಗುರ ಮಾತಗಳನ್ನು ಆಡಿದ್ದಾರೆ. ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಪಕ್ಕದಲ್ಲಿ ಇರೋವಾಗಲೇ ಅವಾಚ್ಯ ಶಬ್ದ ಬಳಕೆ ಮಾಡಿದ್ದಾರೆ ಎನ್ನಲಾಗಿದೆ.
ಕತ್ತಿ ವಿರುದ್ಧ ಜಾತಿ ನಿಂದನೆ ಕೇಸ್
ಇನ್ನು ಬೆಳಗಾವಿಯಲ್ಲಿ ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಲ್ಲದೇ ಅವರ ವಿರುದ್ಧ ಜಾತಿ ನಿಂದನೆ ಕೇಸ್ ಕೂಡ ದಾಖಲಾಗಿದೆ. ಬೆಳಗಾವಿ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.
ವಾಲ್ಮೀಕಿ ಸಮುದಾಯದ ಮುಖಂಡರಿಂದ ದೂರು
ಡಿಸಿಸಿ ಬ್ಯಾಂಕ್ ಚುನಾವಣೆ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ಬಗ್ಗೆ ರಮೇಶ ಕತ್ತಿ ಅವಹೇಳನಕಾರಿ ಮಾತನಾಡಿದ್ದು, ವಾಲ್ಮೀಕಿ ಸಮಾಜದ ಮುಖಂಡ ರಾಜಶೇಖರ ತಳವಾರ ನೇತೃತ್ವದಲ್ಲಿ ದೂರು ನೀಡಲಾಗಿತ್ತು. ಈ ದೂರಿನ ಅನ್ವಯ ಪೊಲೀಸರು ರಮೇಶ್ ಕತ್ತಿ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
ರಮೇಶ್ ಕತ್ತಿ ವಿರುದ್ಧ ಹೋರಾಟಕ್ಕೆ ಕರೆ
ಇನ್ನು ರಮೇಶ್ ಕತ್ತಿ ಹೇಳಿಕೆಯನ್ನು ವಾಲ್ಮೀಕಿ ಸಮುದಾಯ ಖಂಡಿಸಿದೆ. ನಾಳೆ ರಾಜ್ಯಾದ್ಯಂತ ರಮೇಶ್ ಕತ್ತಿ ವಿರುದ್ಧ ವಾಲ್ಮೀಕಿ ಸಮಾಜದ ನಾಯಕರು ಕರೆ ಕೊಟ್ಚಿದ್ದಾರೆ. ಕತ್ತಿ ಹೇಳಿಕೆ ವಿರುದ್ಧ ಬೆಳಗಾವಿಯಲ್ಲಿ ವಾಲ್ಮೀಕಿ ಸಮಾಜದ ನೇತೃತ್ವದಲ್ಲಿ ಪ್ರತಿಭಟನೆಗೆ ನಿರ್ಧಾರ ಮಾಡಲಾಗಿದೆ.
ರಮೇಶ್ ಕತ್ತಿ ವಿರುದ್ಧ ಎಫ್ಐಆರ್! ಹೋರಾಟಕ್ಕೆ ಕರೆ ಕೊಟ್ಟ ವಾಲ್ಮೀಕಿ ಸಮುದಾಯದ ನಾಯಕರು
