Ad image

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

Team SanjeMugilu
1 Min Read

ಮಂಡ್ಯ: ಮುಂಗಾರು ಮಳೆ ಬಳಿಕ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆ ಮಂಡ್ಯ  ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ.
ಕೆಆರ್‌ಎಸ್ ಡ್ಯಾಂ ಸಂಪೂರ್ಣ ಪ್ರಮಾಣದಲ್ಲಿ ಭರ್ತಿಯಾಗಿರುವ ಹಿನ್ನೆಲೆ ಯಾವುದೇ ಕ್ಷಣದಲ್ಲಾದರು ಡ್ಯಾಂನಿಂದ 40 ಸಾವಿರ ಕ್ಯೂಸೆಕ್ ನೀರನ್ನು ನದಿಗೆ ಹರಿಬಿಡುವ ಸಾಧ್ಯತೆ ಇದೆ. ಹೀಗಾಗಿ ಕಾವೇರಿ ನೀರಾವರಿ ನಿಗಮ ಕಾವೇರಿ ನದಿ  ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಿದೆ.
ಸದ್ಯ ಕೆಆರ್‌ಎಸ್ ಡ್ಯಾಂನ ಒಳಹರಿವಿನ ಪ್ರಮಾಣ 20,797 ಕ್ಯೂಸೆಕ್ ಇದ್ದು, 25 ಸಾವಿರ ಕ್ಯೂಸೆಕ್‌ನ್ನು ಸದ್ಯ ನದಿಗೆ ಬಿಡಲಾಗುತ್ತಿದೆ. 124.80 ಗರಿಷ್ಟ ಮಟ್ಟದ ಕೆಆರ್‌ಎಸ್ ಸಂಪೂರ್ಣ ಭರ್ತಿಯಾಗಿದ್ದು, ಡ್ಯಾಂನಲ್ಲಿ ಗರಿಷ್ಠ ಸಾಮರ್ಥ್ಯವಾದ 49.452 ಟಿಎಂಸಿಯಷ್ಟು ನೀರು ಭರ್ತಿಯಾಗಿದೆ.

Share This Article