Ad image

ಗ್ರೇಟರ್​ ಬೆಂಗಳೂರು ಪ್ರಾಧಿಕಾರ ಎಲೆಕ್ಷನ್​; ಚುನಾವಣಾಧಿಕಾರಿ ನೇಮಕ

Team SanjeMugilu
1 Min Read
ಗ್ರೇಟರ್ ಬೆಂಗಳೂರು ಪ್ರಾಧಿಕಾರ  ವ್ಯಾಪ್ತಿಯ ಐದು ನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ರಾಜ್ಯ ಚುನಾವಣೆ ಆಯೋಗ ಸಿದ್ಧತೆ ಆರಂಭಿಸಿದೆ. ರಾಜ್ಯ ಚುನಾವಣೆ ಆಯೋಗದಿಂದ ಜಿಲ್ಲಾ ಚುನಾವಣಾಧಿಕಾರಿಯನ್ನ ನೇಮಿಸಿ ಆದೇಶ ಹೊರಡಿಸಲಾಗಿದೆ. ಜಿಬಿಎ ಮುಖ್ಯ ಆಯುಕ್ತರನ್ನ ಜಿಲ್ಲಾ ಚುನಾವಣಾ ಅಧಿಕಾರಿಯಾಗಿ ನೇಮಿಸಿ ಅಧಿಸೂಚನೆ  ಹೊರಡಿಸಲಾಗಿದೆ.
ಮತಪಟ್ಟಿ ಸಿದ್ಧಪಡಿಸಲು ಸುತ್ತೋಲೆ

ಐದು ಪಾಲಿಕೆಗಳ ಆಯುಕ್ತರನ್ನು ಅಪರ ಜಿಲ್ಲಾ‌ ಚುನಾವಣಾಧಿಕಾರಿಯಾಗಿ ನೇಮಿಸಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ನವೆಂಬರ್ 1 ರಿಂದ 368 ವಾರ್ಡ್ ವಾರು ಮತಪಟ್ಟಿ ಸಿದ್ಧಪಡಿಸಲು ಸುತ್ತೋಲೆ ಕೂಡ ಹೊರಡಿಸಲಾಗಿದೆ.
ಮತದಾರರ ಅಂತಿಮ ಪಟ್ಟಿ ಪ್ರಕಟಣೆಗೆ ಡೆಡ್​ಲೈನ್​

2025, ಜನವರಿ 6 ರಂದು ಪ್ರಕಟಗೊಂಡಿರುವ ವಿಧಾನಸಭಾವಾರು ಮತಪಟ್ಟಿ ಆಧರಿಸಿ ಹೊಸ ಮತಪಟ್ಟಿ ಸಿದ್ಧಪಡಿಸಲು ಸೂಚನೆ ನೀಡಲಾಗಿದೆ. ರಾಜ್ಯ ಚುನಾವಣಾ ಆಯೋಗವು ಜಿಬಿಎ ಮತದಾರರ ಅಂತಿಮ ಪಟ್ಟಿ ಪ್ರಕಟಣೆಗೆ ಜನವರಿ 29, 2026ಕ್ಕೆ ಡೆಡ್​​ಲೈನ್​ ನೀಡಿದೆ.
5 ನಗರ ಪಾಲಿಕೆಗಳಲ್ಲಿ 368 ವಾರ್ಡ್‌

ಬೆಂಗಳೂರು ಕೇಂದ್ರ ನಗರ ಪಾಲಿಕೆಯಲ್ಲಿ 63 ವಾರ್ಡ್‌, ಬೆಂಗಳೂರು ದಕ್ಷಿಣ ನಗರ ಪಾಲಿಕೆ 72, ಬೆಂಗಳೂರು ಪೂರ್ವ ನಗರ ಪಾಲಿಕೆ 50, ಬೆಂಗಳೂರು ಪಶ್ಚಿಮ ನಗರ ಪಾಲಿಕೆ 111, ಬೆಂಗಳೂರು ಉತ್ತರ ನಗರ ಪಾಲಿಕೆಯಲ್ಲಿ 72 ವಾರ್ಡ್‌ಗಳನ್ನು ರಚಿಸಲಾಗಿದೆ. 2011ರ ಜನಗಣತಿ ಆಧಾರದಲ್ಲಿ 5 ನಗರ ಪಾಲಿಕೆಗಳಲ್ಲಿ ಒಟ್ಟು 368 ವಾರ್ಡ್‌ಗಳನ್ನು ವಿಂಗಡಿಸಲಾಗಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜೊತೆಗೆ ಐದು ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರಾಧಿಕಾರ ಹಾಗೂ ಐದು ನಗರ ಪಾಲಿಕೆಗಳಿಗೆ ಆಯುಕ್ತರು, ವಿಶೇಷ ಆಯಕ್ತರುಗಳನ್ನ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಆ ಮೂಲಕ ಬಿಬಿಎಂಪಿ ಇತಿಹಾಸ ಪುಟ ಸೇರಿತು.
ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಪೂರ್ವ, ಬೆಂಗಳೂರು ಪಶ್ವಿಮ ನಗರ ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿದ್ದು, ಪ್ರತಿ ನಗರ ಪಾಲಿಕೆಗಳು ತಲಾ ಎರಡು ವಲಯಗಳಂತೆ ಒಟ್ಟು 10 ವಲಯಗಳನ್ನು ಹೊಂದಿರಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿದ್ದ 198 ವಾರ್ಡುಗಳನ್ನೇ ಐದು ನಗರ ಪಾಲಿಕೆಗಳಿಗೆ ವಿಂಗಡನೆ ಮಾಡಲಾಗಿದೆ.
Share This Article