Ad image

ಕನ್ನಡಿಗರಿಗೆ ಕನ್ನಡದಲ್ಲೇ ರಾಜ್ಯೋತ್ಸವ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ

Team SanjeMugilu
1 Min Read

ನವದೆಹಲಿ: ಕರ್ನಾಟಕದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕನ್ನಡ ರಾಜ್ಯೋತ್ಸವದ  ಶುಭಾಶಯ ತಿಳಿಸಿದ್ದಾರೆ.

ಕನ್ನಡದಲ್ಲೇ ಎಕ್ಸ್‌ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ಇಂದು, ನಾವು ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವಾಗ, ಕರ್ನಾಟಕದ ಜನರಿಗೆ ಪ್ರತೀಕವಾಗಿರುವ ಶ್ರೇಷ್ಠತೆ ಮತ್ತು ಶ್ರಮಶೀಲ ಸ್ವಭಾವವನ್ನು ನಾವು ಆಚರಿಸುತ್ತೇವೆ ಎಂದು ತಿಳಿಸಿದ್ದಾರೆ.

ಸಾಹಿತ್ಯ, ಕಲೆ, ಸಂಗೀತ ಮತ್ತಿತರ ಕ್ಷೇತ್ರಗಳಲ್ಲಿ ಪ್ರತಿಫಲಿಸುವ ಕರ್ನಾಟಕದ ಶ್ರೀಮಂತ ಸಂಸ್ಕೃತಿಯನ್ನು ಸಹ ನಾವು ಆಚರಿಸುತ್ತೇವೆ. ಈ ರಾಜ್ಯವು ಜ್ಞಾನದಲ್ಲಿ ಅಡಗಿರುವ ಪ್ರಗತಿಯ ಮನೋಭಾವವನ್ನು ಪ್ರತಿಬಿಂಬಿಸುತ್ತದೆ. ಕರ್ನಾಟಕದ ಜನರು ಸಂತೋಷ ಮತ್ತು ಆರೋಗ್ಯದಿಂದ ಇರಲಿ ಎಂದು ನಾನು ಪ್ರಾರ್ಥಿಸುತ್ತೇನೆ ಎಂದು ಮೋದಿ ಪೋಸ್ಟ್‌ ಮಾಡಿದ್ದಾರೆ.

ಕರ್ನಾಟಕ ರಾಜ್ಯದೆಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಮನೆ ಮಾಡಿದೆ. ಕನ್ನಡ ಬಾವುಟಗಳು ರಾರಾಜಿಸುತ್ತಿವೆ. ಕನ್ನಡಾಂಬೆ ಸ್ಮರಿಸಿ ಕನ್ನಡಿಗರು ರಾಜ್ಯೋತ್ಸವವನ್ನು ಸಂಭ್ರಮ, ಸಡಗರದಿಂದ ಆಚರಿಸುತ್ತಿದ್ದಾರೆ.

Share This Article