Ad image

ನಾಳೆಯಿಂದ ಬೆಂಗಳೂರು ಸೇರಿ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆ

Team SanjeMugilu
0 Min Read

ಬೆಂಗಳೂರು: ನಾಳೆಯಿಂದ (ನ.5) ಬೆಂಗಳೂರು ಸೇರಿದಂತೆ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ  ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರೀ ಮಳೆ ಹಿನ್ನೆಲೆ ಜನರು ಮತ್ತು ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ. ದೀಪಾವಳಿ ಹಬ್ಬದ ನಂತರ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗುತ್ತಿದೆ. ಆದರೆ ನವೆಂಬರ್ 5ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಬುಧವಾರದಿಂದ 2 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Share This Article