ಬೆಂಗಳೂರು : ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ. ಕೆಲವೇ ಕ್ಷಣಗಳಲ್ಲಿ ಸಂಪೂರ್ಣ ಫಲಿತಾಂಶ ಹೊರಬೀಳಲಿದೆ. ಬಿಹಾರದಲ್ಲಿ ಎನ್ಡಿಎ ಭಾರೀ ಮುನ್ನಡೆ ಸಾಧಿಸಿದ್ದು, ಮೋದಿ ಮ್ಯಾಜಿಕ್ ವರ್ಕೌಟ್ ಆಗಿದೆ. ಇತ್ತ ಆರ್ಜೆಡಿ ಹಾಗೂ ಕಾಂಗ್ರೆಸ್ಗೆ ಭಾರೀ ಮುಖಭಂಗವಾಗಿದೆ. ಸಂಪೂರ್ಣ ಫಲಿತಾಂಶ ಹೊರ ಬೀಳುವ ಮುನ್ನವೇ ಸಿಎಂ ಸಿದ್ದರಾಮಯ್ಯ ಮತಗಳ್ಳತನದ ಆರೋಪ ಮಾಡುತ್ತಿದ್ದಾರೆ. ಆದ್ರೆ ಇತ್ತ ಡಿಸಿಎಂ ಡಿಕೆಶಿ ಶಿವಕುಮಾರ್ ಅವರು ಮುತ್ಸದ್ಧಿ ಹೇಳಿಕೆ ನೀಡಿದ್ದಾರೆ.
ಬಿಹಾರದ ಎಲೆಕ್ಷನ್ ಬಗ್ಗೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಮಾತಾಡಿದ್ದು, ಬಿಹಾರ ಮತದಾರರ ತೀರ್ಪಿಗೆ ನಾವೆಲ್ಲರೂ ತಲೆಬಾಗ್ತೀವಿ ಎಂದು ಮುತ್ಸದ್ಧಿ ಹೇಳಿಕೆ ನೀಡಿದ್ದಾರೆ. ಬಿಹಾರದ ಚುನಾವಣೆ ಹಿನ್ನೆ ರಾಜ್ಯದಲ್ಲಿ ಬಿಹಾರಿಗಳನ್ನ ಭೇಟಿ ಮಾಡಿ ಡಿಸಿಎಂ ಡಿಕೆ ಶಿವಕುಮಾರ್ ಕೂಡ ಅಬ್ಬರದ ಪ್ರಚಾರ ಮಾಡಿದ್ದರು. ಇದೀಗ ಸೋಲನ್ನು ಒಪ್ಪಿಕೊಳ್ಳುವ ಮಾತಾಡಿದ್ದಾರೆ.
ಜನರ ತೀರ್ಪನ್ನು ಗೌರವಯುತವಾಗಿ ಒಪ್ಪಿಕೊಳ್ತೀವಿ, ಮುತ್ಸದ್ದಿ ಹೇಳಿಕೆ ಕೊಟ್ಟ ಡಿಸಿಎಂ ಡಿಕೆ ಶಿವಕುಮಾರ್
