ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್ಲೈನ್ಸ್ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ದಿಢೀರ್ ವಿಮಾನ ರದ್ದಾದ ಹಿನ್ನೆಲೆ ಜನರು ಪರದಾಡುವಂತಾಗಿದೆ. ನೂರಾರು ಜನರು ನಿಲ್ದಾಣದಲ್ಲೇ ಕಾದು ನಿಂತಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ ವಿಮಾನ ನಿಲ್ದಾಣದಲ್ಲೂ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು ವರದಿ ಆಗಿದೆ.
ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಇಂಡಿಗೋ ವಿಮಾನಗಳಲ್ಲಿ ಪೈಲಟ್ ಹಾಗೂ ಸಿಬ್ಬಂದಿ ಕೊರತೆ ಇರುವ ಹಿನ್ನೆಲೆ ವಿಮಾನ ರದ್ದು ಮಾಡಲಾಗಿದೆ ಎನ್ನಲಾಗಿದೆ. ಇದ್ರಿಂದ ಹಲವು ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದ್ದು, ಜನರು ಗಂಟೆಗಟ್ಟಲೆ ಕಾಯುವ ಸ್ಥಿತಿ ನಿರ್ಮಾಣವಾಗಿದೆ. ವಿಮಾನಗಳ ವಿಳಂಬದಿಂದ ಏರ್ಪೋಟ್ ನಲ್ಲಿ ಜನರು ತುಂಬಿದ್ದು, ಡಿಪಾರ್ಚರ್ ಗೇಟ್ ಬಳಿ ಕೂರಲು ಜಾಗವಿಲ್ಲದೆ ಪರದಾಡುವಂತಾಗಿದೆ.
ಸಿಬ್ಬಂದಿ ಕೊರತೆ, ವಿಮಾನ ರದ್ದು!
ಕೆಂಪೇಗೌಡ ಏರ್ಪೋಟ್ನ ಟರ್ಮಿನಲ್ 1ರಲ್ಲಿ ಪ್ರಯಾಣಿಕರ ಪರದಾಟ ಮುಂದುವರಿದಿದೆ. ಕಳೆದ ಎರಡು ದಿನಗಳಿಂದ ಇಂಡಿಗೋ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದ್ದು, ಇಂಡಿಗೋ ವಿಮಾನಗಳಲ್ಲಿ ಪೈಲೆಟ್ ಮತ್ತು ಸಿಬ್ಬಂದಿ ಕೊರತೆ ಕಾರಣ ಎನ್ನಲಾಗ್ತಿದೆ.
ಏರ್ಲೈನ್ಸ್ ವಿರುದ್ದ ಪ್ರಯಾಣಿಕರು ಆಕ್ರೋಶ
ಇಂಡಿಗೋ ಏರ್ಲೈನ್ಸ್ ವಿರುದ್ದ ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಗಂಟೆಗಟ್ಟಲೆ ಕಾದು ಕುಳಿತರೂ ವಿಮಾನಗಳು ಸಮಯಕ್ಕೆ ಬರ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಬೆಂಗಳೂರು ಏರ್ಪೋರ್ಟ್ನಲ್ಲಿ ಫ್ಲೈಟ್ಗಳು ಕ್ಯಾನ್ಸಲ್, ತುಂಬಿ ತುಳುಕಿದೆ ನಿಲ್ದಾಣ, ಪ್ರಯಾಣಿಕರ ಆಕ್ರೋಶ
