Ad image

ಶಿವಮೊಗ್ಗ ಮೂಲದ ಬಿ.ಕಾಂ ವಿದ್ಯಾರ್ಥಿನಿ ಚಿಕ್ಕಮಗಳೂರಲ್ಲಿ ಹೃದಯಾಘಾತಕ್ಕೆ ಬಲಿ

Team SanjeMugilu
0 Min Read

ಚಿಕ್ಕಮಗಳೂರು: ರಾಜ್ಯದಲ್ಲಿ ಹೃದಯಾಘಾತದ ಸಾವಿನ ಪ್ರಮಾಣ ಮುಂದುವರಿದಿದೆ. ಎಳೆ ಹೃದಯಗಳು, ಬಾಳಿ ಬದುಕಬೇಕಾದವ್ರು ಕುಂತಲ್ಲಿ, ನಿಂತಲ್ಲಿ ಪ್ರಾಣ ಕಳೆದುಕೊಳ್ತಿದ್ದಾರೆ. ಅದೇ ರೀತಿ 22 ವರ್ಷದ ವಿದ್ಯಾರ್ಥಿನಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನ  ದಿಶಾ (22) ಎಂದು ಗುರುತಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ದಿಶಾ, ಚಿಕ್ಕಮಗಳೂರಿನ ಶೃಂಗೇರಿಯಲ್ಲಿ ಜೆಸಿಬಿಎಂ ಕಾಲೇಜಿನಲ್ಲಿ ಬಿಕಾಂ (ಅಂತಿಮ ವರ್ಷ) ವ್ಯಾಸಂಗ ಮಾಡುತ್ತಿದ್ದಳು.

ಇಂದು ಬೆಳಗ್ಗೆ ಶೃಂಗೇರಿ ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದಾಗ  ಇದ್ದಕ್ಕಿದ್ದಂತೆ ಎದೆನೋವು ಕಾಣಿಡಿಕೊಂಡು, ಕುಸಿದು ಬಿದ್ದು, ಸಾವನ್ನಪ್ಪಿದ್ದಾಳೆ.

Share This Article