Ad image

ಎಸ್ಕೇಪ್‌ ಆಗುತ್ತಿದ್ದ ರೌಡಿಶೀಟರ್‌ನ ಚೇಸ್‌ ಮಾಡಿ ಹಿಡಿದ ಪೊಲೀಸರು

Team SanjeMugilu
1 Min Read

ಮಂಗಳೂರು: ಪರಾರಿಯಾಗಲು ಯತ್ನಿಸಿದ್ದ ರೌಡಿಶೀಟರ್‌ನನ್ನು ಬೆನ್ನಟ್ಟಿ ಸಿನಿಮೀಯ ರೀತಿಯಲ್ಲಿ ಮೂಡಬಿದ್ರೆ ಪೊಲೀಸರು  ಬಂಧಿಸಿದ್ದಾರೆ.

ಕಲ್ಲಡ್ಕ ನಿವಾಸಿ ತೌಸೀಪ್ ಯಾನೆ ಪಪ್ಪಿ ಬಂಧಿತ ಆರೋಪಿ.‌ ನಟೋರಿಯಸ್ ರೌಡಿ ತೌಸೀಪ್ ಮೂಡಬಿದ್ರೆ ಪರಿಸರದಲ್ಲಿ ಕಾರಿನಲ್ಲಿ ಸಂಚರಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಂಧನಕ್ಕೆ ಮುಂದಾಗಿದ್ದರು.

ಮೂಡಬಿದ್ರೆ ಹೊರವಲಯದ ಕೊಡಂಗಲ್ಲು ಸಮೀಪ ತೌಸೀಪ್ ಬಂದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತು. ಆರೋಪಿಯ ಕಾರನ್ನು ಪೊಲೀಸ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಹಿಂಬಾಲಿಸಿದ್ದರು. ಪೊಲೀಸರು ಹಿಂಬಾಲಿಸುತ್ತಿರುವ ಬಗ್ಗೆ ಅರಿತ ತೌಸೀಪ್‌ ತನ್ನ ಕಾರನ್ನು ಅತಿ ವೇಗದಲ್ಲಿ ಹಿಮ್ಮುಖವಾಗಿ ಚಲಾಯಿಸಿ ಎಸ್ಕೇಪ್‌ ಆಗಲು ಯತ್ನಿಸಿದ್ದ.

ಆತುರದಲ್ಲಿ ಚರಂಡಿಗೆ ಬಿದ್ದು ಕಾರು ಸಿಲುಕಿಕೊಂಡಿತು. ಅಲ್ಲಿಂದ ಪರಾರಿಯಾಗಲು ಯತ್ನಿಸಿದ ತೌಸೀಪ್‌ನನ್ನು ಸಿನಿಮೀಯ ರೀತಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಕಾರಿನಲ್ಲಿ ತಲವಾರ್ ಹಾಗೂ MDMA ವಶಪಡಿಸಿಕೊಂಡಿದ್ದಾರೆ.

Share This Article