Ad image

ಚಿತ್ರದುರ್ಗ ಭೀಕರ ಬಸ್‌ ದುರಂತ, ಸಾವಿನ ಸಂಖ್ಯೆ 7ಕ್ಕೆ ಏರಿಕೆ

Team SanjeMugilu
2 Min Read

ಕ್ರಿಸ್ಮಸ್​​  ದಿನದಂದು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಬಳಿ ನಡೆದ ಭೀಕರ ಬಸ್ ಅಪಘಾತದಲ್ಲಿ  ಮೃತಪಟ್ಟವರ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಈ ಅಪಘಾತದಲ್ಲಿ 6 ಮಂದಿ ಬಲಿಯಾಗಿದ್ದರು. ಇದೀಗ ಸೀಬರ್ಡ್ ಟ್ರಾವೆಲ್ಸ್‌ನ ಸ್ಲೀಪರ್ ಬಸ್ ಚಾಲಕ ಮಹಮದ್ ರಫೀಕ್ ಸಾವನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಮಹಮದ್​ ರಫೀಕ್​, ಚಿಕಿತ್ಸೆ ಫಲಕಾರಿಯಾಗದೇ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ದುರಂತದಲ್ಲಿ ಇದುವರೆಗೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಮಹಮದ್ ರಫೀಕ್ ತೀವ್ರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿದ್ದು, ಇದೀಗ ಸಾವನಪ್ಪಿದ್ದಾರೆ.
ಗಂಭೀರವಾಗಿ ಗಾಯಗೊಂಡಿದ್ದ ಬಸ್​ ಚಾಲಕ ಸಾವು
ಬಸ್​ ದುರಂತದಲ್ಲಿ ಚಾಲಕ ಮೊಹಮ್ಮದ್​ ರಫೀಕ್​ ಗಂಭೀರವಾಗಿ ಗಾಯಗೊಂಡಿದ್ದರು. ಅಪಘಾತದ ರಭಸಕ್ಕೆ ಅವರ ಎರಡು ಕಾಲುಗಳು ಮತ್ತು ಒಂದು ಕೈ ಮುರಿದಿತ್ತು. ಅಪಘಾತದ ನಂತರ ತ್ವರಿತವಾಗಿ ಅವರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರಾತ್ರಿ ತುರ್ತು ಆಪರೇಷನ್ ನಡೆಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ದುರ್ಘಟನೆ ನಿನ್ನೆ ಬೆಳಗ್ಗೆ ಸುಮಾರು 2.30 ಗಂಟೆಗೆ ಹಿರಿಯೂರು ಬಳಿ ಗೊರ್ಲತ್ತು ಕ್ರಾಸ್‌ನಲ್ಲಿ ನಡೆದಿತ್ತು. ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀಬರ್ಡ್ ಎಕ್ಸಿಕ್ಯೂಟಿವ್ ಸ್ಲೀಪರ್ ಬಸ್‌ಗೆ ಎದುರಿನಿಂದ ಬಂದ ಕಂಟೈನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ಬಸ್ ಬೆಂಕಿಗೆ ಆಹುತಿಯಾಗಿ ಸಂಪೂರ್ಣ ಕರಕಲಾಗಿತ್ತು.
ಸಾವಿನ ಸಂಖ್ಯೆ 7ಕ್ಕೆ ಏರಿಕೆ
ಬಸ್‌ನಲ್ಲಿ ಒಟ್ಟು 33 ಪ್ರಯಾಣಿಕರು ಇದ್ದರು. ಇವರಲ್ಲಿ 6 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಕಂಟೈನರ್ ಚಾಲಕ ಸೇರಿದಂತೆ ಮೃತರ ಸಂಖ್ಯೆ 6 ಎಂದು ಪೊಲೀಸರು ದೃಢಪಡಿಸಿದ್ದರು. ಈಗ ಬಸ್ ಚಾಲಕ ಮಹಮದ್ ರಫೀಕ್ ಅವರ ಸಾವಿನೊಂದಿಗೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಈ ಅಪಘಾತದಲ್ಲಿ ಬಸ್ ಚಾಲಕ, ಕಂಡಕ್ಟರ್ ಮತ್ತು ಕ್ಲೀನರ್ ಮೂವರು ಕಿಟಕಿ ಮೂಲಕ ಹೊರಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದರು. ಆದರೆ ಚಾಲಕ ಮಹಮದ್ ರಫೀಕ್ ಅವರಿಗೆ ತೀವ್ರ ಗಾಯಗಳಾಗಿದ್ದವು. ಅವರನ್ನು ತಕ್ಷಣ ಹುಬ್ಬಳ್ಳಿ ಕಿಮ್ಸ್‌ಗೆ ಕರೆತಂದು ಚಿಕಿತ್ಸೆ ನೀಡಲಾಗಿತ್ತು. ಆದರೆ ಗಾಯಗಳ ತೀವ್ರತೆಯಿಂದ ಅವರು ಬದುಕುಳಿಯಲಿಲ್ಲ. ಮೃತರಲ್ಲಿ ಬಿಂಧು ಮತ್ತು ಅವರ ನಾಲ್ಕೂವರೆ ವರ್ಷದ ಮಗಳು ಗ್ರೇಯಾ, ಮಾನಸ, ನವ್ಯ, ರಶ್ಮಿ ಮತ್ತು ಕಂಟೈನರ್ ಚಾಲಕ ಇದ್ದಾರೆ. ಮೃತದೇಹಗಳ ಗುರುತು ಪತ್ತೆಯಾಗಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಗಿದೆ.
ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ
ಗಾಯಾಳುಗಳ ಚಿಕಿತ್ಸೆ ಮುಂದುವರಿದಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಂಜುನಾಥ್, ದೇವಿಕಾ ಮತ್ತು ಕೀರ್ತನ್ ಅವರಿಗೆ ಬರ್ನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಜುನಾಥ್ ಅವರ ದೇಹದ 35% ಸುಟ್ಟು ಹೋಗಿದ್ದು, ಶ್ವಾಸನಾಳಕ್ಕೆ ಗಾಯವಾಗಿದೆ. ಅವರನ್ನು ಐಸಿಯೂನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೀರ್ತನ್ ಮತ್ತು ದೇವಿಕಾ ಅವರಿಗೆ 5% ಸುಟ್ಟ ಗಾಯಗಳಿದ್ದು, ಇಂದು ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಿರಣ್ ಪೌಲ್ ಅವರನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ.
ಪೊಲೀಸರು ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಅಪಘಾತಕ್ಕೆ ಮುಖ್ಯ ಕಾರಣ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಕೇಂದ್ರ ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ 2 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. ಈಗ ಚಾಲಕ ಮಹಮದ್ ರಫೀಕ್ ಅವರ ಸಾವು ದುರಂತಕ್ಕೆ ಇನ್ನಷ್ಟು ದುಃಖ ತಂದಿದೆ.

Share This Article