Ad image

8 ಎಕರೆ ಭೂಮಿ ಕಬಳಿಕೆ; ನೆಲಮಂಗಲ ಹೆಡ್‌ಕಾನ್‌ಸ್ಟೆಬಲ್‌ ಅಮಾನತು

Team SanjeMugilu
1 Min Read

ಬೆಂಗಳೂರು: ಮಾಚನಹಳ್ಳಿ ಗ್ರಾಮದಲ್ಲಿ 8 ಎಕರೆ ಭೂಮಿ ಕಬಳಿಸಿದ್ದ ಆರೋಪದಲ್ಲಿ ನೆಲಮಂಗಲ ಹೆಡ್‌ಕಾನ್‌ಸ್ಟೆಬಲ್‌ ಅಮಾನತಾಗಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಮಾಚನಹಳ್ಳಿ ಗ್ರಾಮದಲ್ಲಿ 8 ಎಕರೆ ಭೂಮಿ ಅಕ್ರಮವಾಗಿ ಕಬಳಿಸಿದ್ದ ಹೆಡ್‌ಕಾನ್‌ಸ್ಟೆಬಲ್ ಗಿರಿಜೇಶ್ ಸೇರಿ ಆರು ಮಂದಿ ವಿರುದ್ಧ ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ದೂರು ದಾಖಲಾಗಿ 20 ದಿನಗಳಾದರೂ ಈ ಪ್ರಕರಣ ಆರೋಪಿಗಳ ಬಂಧನವಾಗಿರಲಿಲ್ಲ. ಸರ್ಕಾರಿ ಸೇವೆಯಲ್ಲಿದ್ದು ಅಕ್ರಮ ಎಸಗಿರುವ ಹಿನ್ನೆಲೆ ಅಮಾನತು ಮಾಡಲಾಗಿದೆ.

ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇತ್ತ ನೆಲಮಂಗಲ ಸಬ್‌ರಿಜಿಸ್ಟ್ರಾರ್ D.P ಸತೀಶ್ ಕುಮಾರ್ ಪ್ರಕರಣ ದಾಖಲಾದ ಬಳಿಕ ಇದುವರೆಗೂ ಕಚೇರಿಗೆ ಹಾಜರಾಗಿಲ್ಲ. ಈ ನಡುವೆ ಸಾರ್ವಜನಿಕ ವಲಯದಲ್ಲಿ ನಾಪತ್ತೆ ಬಗ್ಗೆ ಜನರು ಸಂಶಯ ವ್ಯಕ್ತಪಡಿಸಿದ್ದಾರೆ.

ಕೆಲಸಕ್ಕೆ ಹಾಜರಾಗದೇ ನಾಪತ್ತೆರೆಂಬ ಮಾತು ಕೇಳಿಬರುತ್ತಿದೆ. ಪೊಲೀಸ್ ಜೊತೆ ಸೇರಿ ಅಕ್ರಮ ಎಸಗಿದ ಆರೋಪ ಹೊತ್ತಿರುವ ಈ ಇಬ್ಬರು FIR ದಾಖಲಾದಾಗಿನಿಂದಲೂ ನಾಪತ್ತೆಯಾಗಿದ್ದಾರೆ.

Share This Article