Ad image

ಬ್ಯಾನರ್ ಗಲಾಟೆಗೆ ಜನಾರ್ದನ ರೆಡ್ಡಿ ಪ್ರತಿದೂರು – ಶಾಸಕ ನಾರಾ ಭರತ್ ರೆಡ್ಡಿ ಸೇರಿ ಹಲವರ ವಿರುದ್ಧ FIR

Team SanjeMugilu
1 Min Read

ಬಳ್ಳಾರಿ: ಜಿಲ್ಲೆಯಲ್ಲಿ ಬ್ಯಾನರ್ ಹಾಗೂ ವಾಲ್ಮೀಕ ಪುತ್ಥಳಿಗೆ ಸಂಬಂಧ ನಡೆದ ಗಲಾಟೆ ವಿಚಾರವಾಗಿ ಶಾಸಕ ನಾರಾ ಭರತ್ ರೆಡ್ಡಿ  ಸೇರಿ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಶುಕ್ರವಾರ (ಜ.2) ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಸಮ್ಮುಖದಲ್ಲಿ ಗಂಗಾವತಿ  ಶಾಸಕ ಜನಾರ್ದನ ರೆಡ್ಡಿ  ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಜನಾರ್ದನ ರೆಡ್ಡಿ ಅವರು ಹಲ್ಲೆ ಹಾಗೂ ಕೊಲೆ ಯತ್ನ ಆರೋಪದ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತ ನಾಗರಾಜ್ ಅವರು ಅಕ್ರಮ ಪ್ರವೇಶ, ಜಾತಿ ನಿಂದನೆ, ಕೊಲೆ ಯತ್ನ ಹಾಗೂ ಗಲಾಟೆ ಆರೋಪ ಮೇಲೆ ದೂರು ನೀಡಿದ್ದರು.

ಸ್ವತಃ ಎಎಸ್‌ಪಿ ರವಿಕುಮಾರ್ ಹಾಗೂ ಬ್ರೂಸ್‌ಪೇಟೆ ಠಾಣೆ ಪೊಲೀಸರು ಜನಾರ್ದನ ರೆಡ್ಡಿ ಮನೆಗೆ ಬಂದು ದೂರು ಸ್ವೀಕರಿಸಿದ್ದರು. ದೂರಿನನ್ವಯ ಶಾಸಕ ನಾರಾ ಭರತ್, ಸತೀಶ್ ರೆಡ್ಡಿ, ಚಾನಾಳ್ ಶೇಖರ್, ನಾರಾ ಪ್ರತಾಪ್ ರೆಡ್ಡಿ ಹಾಗೂ ನಾರಾ ಸೂರ್ಯನಾರಾಯರೆಡ್ಡಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಈ ಸಂಬಂಧ ಶಾಸಕ ಜನಾರ್ದನ ರೆಡ್ಡಿ, ಸೋಮಶೇಖರ್ ರೆಡ್ಡಿ, ಮಾಜಿ ಸಚಿವ ಶ್ರೀರಾಮುಲು, ಅಲಿಖಾನ್, ದಮ್ಮೂರ ಶೇಖರ್, ಮೋತ್ಕರ್ ಶ್ರೀನಿವಾಸ್, ಪ್ರಕಾಶ್ ರೆಡ್ಡಿ, ರಮಣ, ಪಾಲನ್ನ, ದಿವಾಕರ್ ಹಾಗೂ ಮಾರುತಿ ಪ್ರಸಾದ್ ವಿರುದ್ಧ ಬ್ರೂಸ್‌ಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

 

 

Share This Article