Ad image

ಶಬರಿಮಲೆ ಚಿನ್ನ ಕಳ್ಳತನ ಕೇಸ್ – ಬೆಂಗಳೂರು, ಬಳ್ಳಾರಿ ಸೇರಿ ಹಲವೆಡೆ ಇಡಿ ದಾಳಿ

Team SanjeMugilu
1 Min Read

ತಿರುವನಂತಪುರ: ಶಬರಿಮಲೆ ಚಿನ್ನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು, ಬಳ್ಳಾರಿ ಸೇರಿದಂತೆ ಹಲವೆಡೆ ಇಡಿ ದಾಳಿ  ನಡೆಸಿದೆ.

ಈ ಪ್ರಕರಣ ಸಂಬಂಧ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದೀಗ ಇಡಿ ಎಂಟ್ರಿಕೊಟ್ಟಿದೆ. ಬೆಂಗಳೂರು, ಬಳ್ಳಾರಿ ಹಾಗೂ ತಿರುವನಂತಪುರಂದ ಹಲವೆಡೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸಿದೆ.

ಚಿನ್ನ ಕಳ್ಳತನದ ಆರೋಪದಲ್ಲಿ ಜೈಲುಪಾಲಾಗಿರುವ ಗೋವರ್ಧನ್ ಒಡೆತನದ ರೊದ್ದಂ ಜ್ಯುವೆಲರಿ ಶಾಪ್ ಹಾಗೂ ಮನೆ, ಬೆಂಗಳೂರಿನ ಶ್ರೀರಾಂಪುರ ಅಯ್ಯಪ್ಪ ದೇವಸ್ಥಾನ ಹಾಗೂ ಟ್ರಸ್ಟಿ ಮನೆ, ಉನ್ನಿಕೃಷ್ಣನ್ ಮನೆ ಸೇರಿ ಹಲವೆಡೆ ದಾಳಿ ನಡೆಸಿದ್ದಾರೆ. ಈ ಹಿಂದೆ ಎಸ್‌ಐಟಿ ಅಧಿಕಾರಿಗಳು ಕೂಡ ದಾಳಿ ನಡೆಸಿದ್ದರು.

ಈಗಾಗಲೇ ಎಸ್‌ಐಟಿ ಅಧಿಕಾರಿಗಳು ದೇಗುಲದ ಪ್ರಧಾನ ಅರ್ಚಕ ಕಂದರಾರು ರಾಜೀವ್‌ನನ್ನು ಅರೆಸ್ಟ್ ಮಾಡಿದ್ದಾರೆ. ಚಿನ್ನ ಕಳ್ಳತನದ ಹಿಂದೆ ದೊಡ್ಡ ಸಂಚು ಮತ್ತು ಮಧ್ಯವರ್ತಿಗಳ ಲಿಂಕ್ ಇರುವ ಬಗ್ಗೆ ಎಸ್‌ಐಟಿ ಶಂಕೆ ವ್ಯಕ್ತಪಡಿಸಿದೆ. ಕಂದರಾರು ರಾಜೀವ್, ತಂತ್ರಿ ಉನ್ನಿಕೃಷ್ಣನ್ ಪೊಟ್ಟಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದಾರೆ ಎನ್ನಲಾಗಿದೆ. ದೇವಸ್ಥಾನದ ಫಲಕಗಳಿಗೆ ಚಿನ್ನ ಲೇಪಿಸುವ ನೆಪದಲ್ಲಿ ನಡೆದ ಪ್ರಾಯೋಜಕತ್ವದ ನಂತರ ಚಿನ್ನದ ಕಳ್ಳತನಕ್ಕೆ ಕಾರಣವಾಯಿತು ಎಂಬ ಆರೋಪ ಕೇಳಿಬಂದಿದೆ. ಫಲಕಗಳಿಗೆ ಚಿನ್ನ ಲೇಪಿಸಲು ಕಂದರಾರು ರಾಜೀವ್ ಅನುಮತಿ ನೀಡಿದ್ದ ಎಂಬುದು ತನಿಖೆಯಲ್ಲಿ ಮಹತ್ವದ ಅಂಶವಾಗಿದೆ. ಕಳೆದ ನವೆಂಬರ್‌ನಲ್ಲಿಯೇ ಎಸ್‌ಐಟಿ ರಾಜೀವ್‌ನಿಂದ ಮಾಹಿತಿ ಸಂಗ್ರಹಿಸಿತ್ತು.

Share This Article