Ad image

ಆಸ್ತಿಗಾಗಿ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಂದ ಪಾಪಿ ಮಗ

Team SanjeMugilu
1 Min Read

ರಾಯಚೂರು: ಆಸ್ತಿಗಾಗಿ  ಕೌಟುಂಬಿಕ ಕಲಹ  ಹಿನ್ನೆಲೆ ತಾಯಿಯನ್ನೇ ಮಗ ಕೊಂದು ಪರಾರಿಯಾಗಿರುವ ಘಟನೆ ರಾಯಚೂರಿನ ಲಿಂಗಸೂಗೂರು ತಾಲೂಕಿನ ಜಕ್ಕೇರುಮಡು ತಾಂಡದಲ್ಲಿ ನಡೆದಿದೆ.

ಚಂದವ್ವ (55) ಕೊಲೆಯಾದ ಮಹಿಳೆ. ಕುಮಾರ ತಾಯಿಯನ್ನೇ ಕೊಲೆ ಮಾಡಿ ಪರಾರಿಯಾದ ಪಾಪಿ ಮಗ. ಮದ್ಯದ ನಶೆಯಲ್ಲಿ ತಾಯಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕುಮಾರ ಗ್ರಾಮಕ್ಕೆ ಬಂದಿದ್ದ. ಪಿತ್ರಾರ್ಜಿತ ಮೂರು ಎಕರೆ ಜಮೀನನ್ನು ಅಣ್ಣತಮ್ಮಂದಿರಬ್ಬರಿಗೆ ಪಾಲು ಮಾಡುವಂತೆ ಕುಮಾರ ತಾಯಿಯೊಂದಿಗೆ ಗಲಾಟೆ ಮಾಡಿಕೊಂಡಿದ್ದ. ತಾಯಿ ಆಸ್ತಿ ಭಾಗಮಾಡಲು ಒಪ್ಪಿರಲಿಲ್ಲ, ಇದರಿಂದ ಮಾತಿನ ಚಕಮಕಿ ನಡೆದು ಶುರುವಾದ ಗಲಾಟೆ ಹೆತ್ತ ತಾಯಿಯ ಕೊಲೆಯಲ್ಲಿ ಅಂತ್ಯವಾಗಿದೆ.  ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮರಣೋತ್ತರ ಪರೀಕ್ಷೆಗಾಗಿ ಶವವನ್ನ ಶವಾಗಾರಕ್ಕೆ ರವಾನಿಸಲಾಗಿದ್ದು, ಆರೋಪಿ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

Share This Article