Ad image

ಬೈಕ್‌ಗೆ KSRTC ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವು; ಇಬ್ಬರಿಗೆ ಗಾಯ

Team SanjeMugilu
0 Min Read

ಮೈಸೂರು: ಬೈಕ್‌ಗೆ ಬಸ್ ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ಮೈಸೂರು  ಜಿಲ್ಲೆಯಲ್ಲಿ ನಡೆದಿದೆ.

ತಾಲೂಕಿನ ನಾಗಮಂಗಲ ಗ್ರಾಮದ ನಿವಾಸಿ ಜೀವನ್ ಪತ್ನಿ ಅಶ್ವಿನಿ (36) ಮೃತ ದುರ್ದೈವಿ. ಹಿಂಬದಿ ಸವಾರರಾಗಿದ್ದ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಆಕೆಯ ಪತಿ ಹಾಗೂ ಮಗು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹುಣಸೂರು ತಾಲೂಕಿನ ಯಶೋಧರಪುರ ಗೇಟ್ ಬಳಿ ಘಟನೆ ನಡೆದಿದೆ.

ಜೀವನ್ ಬೈಕಿನಲ್ಲಿ ಪತ್ನಿ ಹಾಗೂ ಮಗುವಿನೊಂದಿಗೆ ಹುಣಸೂರು ಕಡೆಗೆ ಬರುತ್ತಿದ್ದ ವೇಳೆ ಪಿರಿಯಾಪಟ್ಟಣ ಕಡೆಯಿಂದ ಬಂದ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article