ಹಾವೇರಿ: ನಗರ ಪ್ರದೇಶದಲ್ಲಿ ಇತ್ತೀಚೆಗೆ ಬೀದಿ ನಾಯಿ ದಾಳಿಗೆ ಜನರು ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ. ರಾಣೇಬೆನ್ನೂರು ನಗರದಲ್ಲಿಯೇ 15ಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಬಾಲಕನ ಮೇಲೆ ಡೆಡ್ಲಿ ಅಟ್ಯಾಕ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು ಬಳಿಕ ಜಿಲ್ಲೆ ಹಾಗೂ ಪಟ್ಟಣಗಳಲ್ಲೂ ನಾಯಿಗಳು ದಾಳಿ ಮಾಡುತ್ತಿವೆ. ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದಲ್ಲಿಯೇ 15ಕ್ಕೂ ಅಧಿಕ ಜನರಿಗೆ ಹುಚ್ಚು ನಾಯಿ ದಾಳಿ ಮಾಡಿ ಗಾಯಗೊಳಿಸಿದೆ. ಶ್ವಾನದ ಡೆಡ್ಲಿ ಅಟ್ಯಾಕ್‌ನಿಂದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ನಗರದ ಉಮಾಶಂಕರ್ ಮತ್ತು ಗೌರಿಶಂಕರ ನಗರದ ಜನರು ಬೀದಿ ನಾಯಿ ದಾಳಿಗೆ ತುತ್ತಾಗುತ್ತಿದ್ದಾರೆ. ಸಂಜೆ ಮನೆಯ ಮುಂದೆ ನಿಂತ ಬಾಲಕನ ಮೇಲೆ ಶ್ವಾನಗಳು ಏಕಾಏಕಿ ದಾಳಿ ಮಾಡಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ ಏರಿಯಾದಲ್ಲಿ ಓಡಾಡಿದ ನಾಯಿ ಸಿಕ್ಕ ಮಹಿಳೆಯರು, ವಯೋವೃದ್ಧರು ಸೇರಿದಂತೆ ಮಕ್ಕಳ ಮೇಲೆ ದಾಳಿ ಮಾಡಿ ಗಾಯಗೊಳಿಸಿದೆ.
ಹಾವೇರಿ ಜಿಲ್ಲೆಯ ಹಲವು ಕಡೆ ಬೀದಿ ನಾಯಿಗಳ ದಾಳಿ ನಿರಂತರವಾಗಿ ನಡೆಯುತ್ತಿದೆ. ಆದರೂ ಕೂಡಾ ನಗರಸಭೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶಾಸಕ ಪ್ರಕಾಶ ಕೋಳಿವಾಡ ಭೇಟಿ ನೀಡಿ ಸಾಂತ್ವನ ಹೇಳಿ ಚಿಕಿತ್ಸೆ ಕೊಡಿಸುವ ಭರವಸೆ ನೀಡಿದ್ದಾರೆ. ಈ ಮಧ್ಯೆ ಜನರ ಮೇಲೆ ದಾಳಿ ಮಾಡುತ್ತಿರುವ ಶ್ವಾನಗಳ ಸೆರೆ ಕಾರ್ಯಚರಣೆ ನಡೆಯುತ್ತಿದೆ.
