Ad image

ಸಾರಿಗೆ ಇಲಾಖೆ ನೌಕರನ ಬರ್ಬರ ಹತ್ಯೆ ಕೇಸ್ – 10 ಮಂದಿ ವಿರುದ್ಧ ಎಫ್‌ಐಆರ್

Team SanjeMugilu
0 Min Read

ಹಾಸನ: ಆಸ್ತಿ ವಿಚಾರಕ್ಕಾಗಿ ಸಾರಿಗೆ ಇಲಾಖೆ ನೌಕರ ವೀರಪ್ಪ ಹತ್ಯೆ ಪ್ರಕರಣದಲ್ಲಿ ಹತ್ತು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

ಆಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಪುತ್ರ ವಿವೇಕ್, ಪೊಲೀಸ್ ಠಾಣೆಗೆ ದೂರು ನೀಡಿದ್ದರು. ವಿವೇಕ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದಾರೆ.

ಮಲ್ಲಮ್ಮ, ಮಹದೇವಮ್ಮ, ಹರೀಶ, ಲೋಕೇಶ, ಮಹದೇವ, ಬಾಗಲಯ್ಯ, ಸತೀಶ, ಜಯರಾಮ, ಧರ್ಮ, ಸ್ವಾಮಿ ವಿರುದ್ಧ ಪ್ರಕರಣ ದಾಖಲಾಗಿದೆ. ವೀರಪ್ಪ ಅವರ ಮೃತದೇಹ ಸಂಪೂರ್ಣ ಸುಟ್ಟು ಹೋಗಿದೆ. ಪೊಲೀಸರು ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

Share This Article