Ad image

ನಾಳೆ ವಿಜಯಪುರದಲ್ಲಿ ಕಿತ್ತೂರು ಕರ್ನಾಟಕ ಭಾಗದ ʻಜೆಡಿಎಸ್ ಬೆಳ್ಳಿಹಬ್ಬʼ ಸಮಾವೇಶ

Team SanjeMugilu
0 Min Read

ವಿಜಯಪುರ: ಇಲ್ಲಿ ನಾಳೆ ಜೆಡಿಎಸ್ ಪಕ್ಷದಿಂದ  ಜನತಾ ಸಮಾವೇಶ ನಡೆಯಲಿದೆ. ಕಿತ್ತೂರು ಕರ್ನಾಟಕ ಭಾಗದ ಜೆಡಿಎಸ್ ಬೆಳ್ಳಿಹಬ್ಬದ ಸಮಾವೇಶ ಆಯೋಜನೆ ಮಾಡಲಾಗಿದೆ.

ಶುಕ್ರವಾರ ವಿಜಯಪುರಕ್ಕೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಲಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರದಂತೆ ಹಲವಾರು ಜೆಡಿಎಸ್ ಮುಖಂಡರು ಭಾಗಿ ಆಗಲಿದ್ದಾರೆ.

ವಿಜಯಪುರ ನಗರದ ಹೊರವಲಯದಲ್ಲಿರುವ ಸಿಂದಗಿ ಬೈಪಾಸ್ ನಲ್ಲಿ ಸಮಾವೇಶ ಆಯೋಜನೆ ಮಾಡಲಾಗಿದೆ. ಕಿತ್ತೂರು ಕರ್ನಾಟಕ ಭಾಗದ ಜಿಲ್ಲೆಗಳಿಂದ ಕಾರ್ಯಕರ್ತರು ಸಮಾವೇಶದಲ್ಲಿ ಭಾಗಿ ಆಗಲಿದ್ದಾರೆ.

Share This Article