Ad image

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧುಗೊಳಿಸಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ತಡೆ

Team SanjeMugilu
1 Min Read

ಬೆಂಗಳೂರು/ಚಿಕ್ಕಬಳ್ಳಾಪುರ: ಸುಬ್ಬಾರೆಡ್ಡಿಯ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನೀಡಿದೆ.
ನಾಮಪತ್ರ ಸಲ್ಲಿಕೆ ವೇಳೆ ಸಂಪೂರ್ಣ ಆಸ್ತಿ ಘೋಷಣೆ ಮಾಡಿಲ್ಲ, ಕ್ರಿಮಿನಲ್ ಕೇಸ್‌ಗಳ ಮಾಹಿತಿಯನ್ನು ಮರೆಮಾಚಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಮುನಿರಾಜು ಅವರು 2023 ಜೂನ್ 24ರಂದು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಆಸ್ತಿ ಮಾಹಿತಿಯನ್ನು ಉಲ್ಲಂಘನೆ ಮಾಡಿದ್ದು ದೃಢಪಟ್ಟ ಹಿನ್ನೆಲೆಯಲ್ಲಿ ಸುಬ್ಬಾರೆಡ್ಡಿ ಶಾಸಕ ಸ್ಥಾನವನ್ನು ಹೈಕೋರ್ಟ್‌ ಅಸಿಂಧುಗೊಳಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಬ್ಬಾರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಇಂದು ವಿಚಾರಣೆ ನಡೆಸಿದ ಸಿಜೆಐ ಸೂರ್ಯಕಾಂತ್ ನೇತೃತ್ವದ ಪೀಠವು ಹೈಕೋರ್ಟ್‌ ನೀಡಿದ್ದ ಆದೇಶಕ್ಕೆ ತಡೆ ನೀಡಿ, ಸೆಪ್ಟೆಂಬರ್ 7ಕ್ಕೆ ವಿಚಾರಣೆ ಮುಂದೂಡಿದೆ. ಇದೇ ವೇಳೆ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ. ಹೈಕೋರ್ಟ್‌ ಆದೇಶಕ್ಕೆ ತಡೆ ನೀಡಿದ ಹಿನ್ನೆಲೆ ಮುಂದಿನ ವಿಚಾರಣೆವರೆಗೂ ಎಸ್‌.ಎನ್‌ ಸುಬ್ಬಾರೆಡ್ಡಿ ಅವರು ಬಾಗೇಪಲ್ಲಿ ಶಾಸಕರಾಗಿ ಮುಂದುವರಿಯಲಿದ್ದಾರೆ.

Share This Article