ಬಿಹಾರ ಚುನಾವಣಾ ದಿನಾಂಕ ಪ್ರಕಟ – ನ.6, 11ರಂದು ಚುನಾವಣೆ, ನ.14ಕ್ಕೆ ಫಲಿತಾಂಶ
ನವದೆಹಲಿ: ಕೊನೆಗೂ ಬಿಹಾರ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಈ ಬಾರಿ 2 ಹಂತಗಳಲ್ಲಿ ಮತದಾನ ನಡೆಯಲಿದೆ. ನವೆಂಬರ್ 6ರ ಗುರುವಾರ ಮೊದಲ ಹಂತ, ನವೆಂಬರ್ 11ರ ಮಂಗಳವಾರ 2ನೇ ಹಂತದಲ್ಲಿ ಒಟ್ಟು 243 ವಿಧಾನಸಭಾ…
ಅನನ್ಯಾ ಭಟ್ ಕೇಸ್ – ಖ್ಯಾತ ಬಹುಭಾಷಾ ನಟನ ಸಹೋದರನಿಗೆ SIT ನೋಟಿಸ್ ಸಾಧ್ಯತೆ
ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅನನ್ಯಾ ಭಟ್ ಕಟ್ಟುಕತೆ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮುಂದುವರಿಸಿದೆ. ಇದೀಗ ಬಹುಭಾಷಾ ನಟ, ನಿರ್ದೇಶಕನ ಸಹೋದರನಿಗೆ ಎಸ್‌ಐಟಿ ನೋಟಿಸ್ ನೀಡಲು ಮುಂದಾಗಿದೆ. ಧರ್ಮಸ್ಥಳ ಬುರುಡೆ ಫೈಲ್ಸ್ ವಿಚಾರದಲ್ಲಿ ದಿನೇ ದಿನೇ ಹೊಸ…
ಸುಪ್ರೀಂ ಸಿಜೆಐ ತಾಯಿ ಆರ್‌ಎಸ್‌ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಕೃತ್ಯ: ಸಂತೋಷ್ ಲಾಡ್
ಬೆಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಗವಾಯಿ ಅವರ ತಾಯಿ, ಆರ್‌ಎಸ್‌ಎಸ್ ಕಾರ್ಯಕ್ರಮದ ಆಹ್ವಾನ ಸ್ವೀಕರಿಸದ್ದಕ್ಕೆ ಈ ಕೃತ್ಯ ಎಸಗಿರಬಹುದು ಎಂದು ಸಚಿವ ಸಂತೋಷ್ ಲಾಡ್ ಶಂಕೆ ವ್ಯಕ್ತಪಡಿಸಿದ್ದಾರೆ. ಸಿಜೆಐ ಮೇಲೆ ಶೂ ಎಸೆಯಲು ಮುಂದಾದ ಘಟನೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ…
ಸನಾತನ ಧರ್ಮಕ್ಕೆ ಅವಮಾನ ಸಹಿಸಲ್ಲ- ಸಿಜೆಐ ಗವಾಯಿ ಮೇಲೆ ಶೂ ಎಸೆಯಲು ಮುಂದಾದ ವಕೀಲ
ನವದೆಹಲಿ: ಸುಪ್ರೀಂ ಕೋರ್ಟ್ ಹಿರಿಯ ವಕೀಲರೊಬ್ಬರು ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಮುಂದಾದ ಘಟನೆ ಇಂದು ನಡೆದಿದೆ. ಮಧ್ಯಪ್ರದೇಶದ ಖಜುರಾಹೊ ದೇವಾಲಯ ಸಂಕೀರ್ಣದಲ್ಲಿ ವಿಷ್ಣುವಿನ ವಿಗ್ರಹವನ್ನು ಪುನಃಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ…
ಕೋಲಾರ, ಚಿಕ್ಕಬಳ್ಳಾಪುರಕ್ಕೆ ಕೃಷ್ಣಾ ನದಿ ನೀರು; ಬಯಲುಸೀಮೆ ಜನರ ಬೇಡಿಕೆ
ಚಿಂತಾಮಣಿ: ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ನಡೆಯುತ್ತಿರುವ ಸಮಾವೇಶಕ್ಕೆ ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ನಟ ಪವನ್ ಕಲ್ಯಾಣ್ಗೆ ಮಾಜಿ ಶಾಸಕ ಜೆಕೆ ಕೃಷ್ಣಾರೆಡ್ಡಿ ಸನ್ಮಾನ ಮಾಡಿದ್ದಾರೆ. ಈ ವೇಳೆ ಪವನ್ ಕಲ್ಯಾಣ್ಗೆ ಸಾವಿರಾರು ಅಭಿಮಾನಿಗಳು ಜೈಕಾರ ಹಾಕಿದ್ದಾರೆ. ಬಳಿಕ ಕಾರ್ಯಕ್ರಮವನ್ನ ಉದ್ದೇಶಿಸಿ…
ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದ್ರೆ ಅಂಗಡಿ ಲೈಸೆನ್ಸ್ ರದ್ದು: ಈಶ್ವರ್ ಖಂಡ್ರೆ
ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ ಕ್ಯಾನ್ಸಲ್ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು…
ನಾನು ಹಿರಿಯ, ಸಚಿವ ಸ್ಥಾನದ ಆಕಾಂಕ್ಷಿ: ನರೇಂದ್ರ ಸ್ವಾಮಿ
ಬೆಂಗಳೂರು: ನಾನು ಹಿರಿಯ. ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿ ಎಂದು ಶಾಸಕ, ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ನರೇಂದ್ರ ಸ್ವಾಮಿ ಹೇಳಿದ್ದಾರೆ. ನವೆಂಬರ್ ಕ್ರಾಂತಿ ಹಾಗೂ ಸಂಪುಟ ವಿಸ್ತರಣೆ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ನಾನು ಕೂಡಾ ಸಚಿವ…
ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೆ ಬಿರುಕು?
ಬೆಂಗಳೂರು: ಕಾಂಗ್ರೆಸ್‌ನ ವೀರಶೈವ, ಲಿಂಗಾಯತ ಸಚಿವರಲ್ಲಿ ಮತ್ತೊಮ್ಮೆ ಬಿರುಕು ಶುರುವಾಯ್ತಾ ಎಂಬ ಪ್ರಶ್ನೆ ಎದ್ದಿದೆ. ಪ್ರತ್ಯೇಕ ಲಿಂಗಾಯತ ಧರ್ಮದ ಕೂಗಿನ ವಿಚಾರದಲ್ಲಿ ಮೂಡಿರುವ ಅಸಮಾಧಾನ ಮತ್ತೊಮ್ಮೆ ಸಚಿವ ಈಶ್ವರ್ ಖಂಡ್ರೆ ವರ್ಸಸ್ ಎಂ.ಬಿ ಪಾಟೀಲ್ ಫೈಟ್ ಜೋರಾಗುವ ಸಾಧ್ಯತೆಯಿದೆ. ಪ್ರತ್ಯೇಕ ಲಿಂಗಾಯತ…
ಮಧ್ಯಪ್ರದೇಶ ಸಿರಪ್ ದುರಂತ; ನಮ್ಮ ರಾಜ್ಯದಲ್ಲಿ ಈ ಸಿರಪ್ ಸರಬರಾಜು ಆಗಿಲ್ಲ: ದಿನೇಶ್ ಗುಂಡೂರಾವ್
ಹಾಸನ: ಮಧ್ಯಪ್ರದೇಶ ಸಿರಪ್ ದುರಂತ ಪ್ರಕರಣದ ಬಳಿಕ ನಮ್ಮ ರಾಜ್ಯದಲ್ಲಿ ಕೂಡ ಈ ಬಗ್ಗೆ ಕ್ರಮ ವಹಿಸಲಾಗಿದೆ. ಔಷಧ ಮಾದರಿ ಪರೀಕ್ಷೆಯಲ್ಲಿ ರಾಜ್ಯ ನಂಬರ್ ಒನ್ ಇದೆ. ಈ ಕಾಫ್ ಸಿರಪ್ ನಮ್ಮ ರಾಜ್ಯದಲ್ಲಿ ಸರಬರಾಜು ಆಗಿಲ್ಲ ಎಂದು ಸಚಿವ ದಿನೇಶ್…
ಸಿದ್ದರಾಮಯ್ಯನವರೇ, ಮೊದಲು ಬೆಂಗಳೂರಿನ ಗುಂಡಿ ಮುಚ್ಚಿ, ಬಳಿಕ ನಮ್ಮ ಮೆಟ್ರೋ ಹೆಸರು ಬದಲಾಯಿಸಿ
ಬೆಂಗಳೂರು: ನಮ್ಮ ಮೆಟ್ರೋ ಬದಲು ಬಸವ ಮೆಟ್ರೋ ಎಂದು ನಾಮಕರಣ ಮಾಡಲು ಸಿಎಂ ಸಿದ್ದರಾಮಯ್ಯ ಶಿಫಾರಸ್ಸು ಮಾಡಿದ್ದು ಈಗ ಪರ ವಿರೋಧ ಚರ್ಚೆಗೆ ಗ್ರಾಸವಾಗಿದೆ. ಬೆಂಗಳೂರಿನಲ್ಲಿ ನಡೆದ ಬಸವ ಜಯಂತೋತ್ಸವದಲ್ಲಿ ಸಿದ್ದರಾಮಯ್ಯ, ನಮ್ಮ ಮೆಟ್ರೋಗೆ ಬಸವ ಮೆಟ್ರೋ ಎಂದು ನಾಮಕರಣ ಮಾಡುವ…