ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ
ನವದೆಹಲಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತ-ರಷ್ಯಾ ಒಟ್ಟಾಗಿ ಸಾಗಲಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ನವದೆಹಲಿಯಲ್ಲಿ ಪ್ರಧಾನಿ ಮೋದಿ ಹಾಗೂ ಪುಟಿನ್ ನಡುವಿನ ಜಂಟಿ ಸುದ್ದಿಗೋಷ್ಠಿಯಲ್ಲಿ ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿ ಉಲ್ಲೇಖಿಸಿ ಅವರು ಮಾತನಾಡಿದರು. ಭಯೋತ್ಪಾದನೆಯನ್ನು ಎದುರಿಸುವ…
ಗಂಧದ ಎಣ್ಣೆ ಖರೀದಿಯಲ್ಲಿ ಭಾರೀ ಭ್ರಷ್ಟಾಚಾರ: ಅಂಕಿ-ಅಂಶ ಸಮೇತ ಬಯಲಿಗೆಳೆದ ಜೆಡಿಎಸ್ ಶಾಸಕ
ಬೆಂಗಳೂರು: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತದಲ್ಲಿ ಗಂಧದ ಎಣ್ಣೆ ಖರೀದಿಯಲ್ಲಿ ಭ್ರಷ್ಟಾಚಾರ ಆಗಿದೆ ಎಂದು ಜೆಡಿಎಸ್ ಶಾಸಕ ಹೆಚ್.ಟಿ ಮಂಜು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕೆಎಸ್ಡಿಎಲ್ನಲ್ಲಿ ಸಾಬೂನು ತೈಲ ಕಚ್ಚಾ ಸಾಮಾಗ್ರಿಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಕಂಪನಿಗೆ…
ರೈತನಿಗೆ ಪರಿಹಾರ ವಿಳಂಬ – ಶಿವಮೊಗ್ಗ ಡಿಸಿ ಕಾರು ಜಪ್ತಿಗೆ ಕೋರ್ಟ್ ಆದೇಶ
ಶಿವಮೊಗ್ಗ: ರೈತರೊಬ್ಬರಿಗೆ ಪರಿಹಾರ ನೀಡಲು ವಿಳಂಬ ಮಾಡಿದ್ದಕ್ಕಾಗಿ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಾರು ಜಪ್ತಿ ಮಾಡುವಂತೆ ಶಿವಮೊಗ್ಗದ ನ್ಯಾಯಾಲಯ ಆದೇಶಿಸಿದೆ. ವಸತಿ ಯೋಜನೆಗಾಗಿ ಹರಮಘಟ್ಟದ ಕೃಷಿಕ ನಂದಾಯಪ್ಪ ಅವರ 1 ಎಕರೆ ಜಮೀನನ್ನು 1992ರಲ್ಲಿ ಸರ್ಕಾರ ವಶಕ್ಕೆ ಪಡೆದಿತ್ತು. ಇದಕ್ಕೆ 22 ಲಕ್ಷ…
ನಾವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದ್ದೇವೆ – ಪುಟಿನ್ ಜೊತೆಗಿನ ಸಂವಾದದಲ್ಲಿ ಮೋದಿ ಮಾತು
ನವದೆಹಲಿ: ಭಾರತವು ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ. ಶಾಂತಿಯಲ್ಲಿ ಭಾರತ ನಂಬಿಕೆಯಿಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿಅವರು ಹೇಳಿದರು. ಹೈದರಾಬಾದ್ ಹೌಸ್‌ನಲ್ಲಿ ನಡೆದ ಭಾರತ-ರಷ್ಯಾ 23ನೇ ಶೃಂಗಸಭೆಯಲ್ಲಿ ಪುಟಿನ್ ಜೊತೆಗೆ ಸಂವಾದ ನಡೆಸಿದ ಪ್ರಧಾನಿ ಮೋದಿ, ಮತ್ತೊಮ್ಮೆ ಉಕ್ರೇನ್ ವಿರುದ್ಧದ ಯುದ್ಧ ನಿಲ್ಲಿಸುವಂತೆ…
ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಕೇಸ್‌ಗೆ ಟ್ವಿಸ್ಟ್ – ಉದ್ಯಮಿ ಕಿಡ್ನ್ಯಾಪ್ ಹಿಂದೆ ರಘು ಕೈವಾಡ ಸಾಬೀತು
ಬೆಂಗಳೂರು: ನಿರ್ದೇಶಕ ನಂದಕಿಶೋರ್‌ಗೆ ಸಾಲ ನೀಡಿದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಉದ್ಯಮಿ ಮನೋಜ್ ಕಿಡ್ನ್ಯಾಪ್ ಹಿಂದೆ ಬೇಕರಿ ರಘು ಕೈವಾಡವಿರುವುದು ಸಾಬೀತಾಗಿದೆ. ಸಿನಿಮಾ ನಿರ್ದೇಶಕ ನಂದಕಿಶೋರ್‌ಗೆ ರೌಡಿಶೀಟರ್ ರಾಜೇಶ್ ಅಲಿಯಾಸ್ ಅಪ್ಪಿ ಮೂಲಕ ಸಾಲ ಕೊಟ್ಟಿದ್ದ ಉದ್ಯಮಿ ಮನೋಜ್‌ನ ಅಪಹರಣವಾಗಿತ್ತು. ಇದರ…
ಭಾರತವನ್ನು ಬೆಂಬಲಿಸಿ ಟ್ರಂಪ್ ಬೂಟಾಟಿಕೆಯನ್ನು ಬಯಲು ಮಾಡಿದ ಪುಟಿನ್
ನವದೆಹಲಿ: ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೂಟಾಟಿಕೆಯನ್ನು ಬಯಲು ಮಾಡಿದ್ದಾರೆ. ಅಮೆರಿಕ ಈಗಲೂ ನಮ್ಮಿಂದ ಪರಮಾಣು ಇಂಧನವನ್ನು ಖರೀದಿಸುತ್ತಿರುವಾಗ ಭಾರತ ಯಾಕೆ ಕಚ್ಚಾ ತೈಲ ಖರೀದಿಸಬಾರದು ಎಂದು ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಪ್ರಶ್ನಿಸಿದ್ದಾರೆ.…
ಶಾರುಖ್ ಖಾನ್ ಪುತ್ರನಿಂದ ಅಸಭ್ಯ ವರ್ತನೆ ಕೇಸ್ – ತನಿಖೆಗಿಳಿದ ಕಬ್ಬನ್ ಪಾರ್ಕ್ ಪೊಲೀಸರು
ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅಸಭ್ಯವಾಗಿ ಸನ್ನೆ ಮಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಸದ್ಯ ಪ್ರಕರಣ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ತನಿಖೆ ಶುರುಮಾಡಿದ್ದಾರೆ. ಕಳೆದ ವಾರಾಂತ್ಯದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಬೆಂಗಳೂರಿಗೆ ದಿಢೀರ್…
ಶತಕದ ಗಡಿಗೆ ಟೊಮ್ಯಾಟೋ ಬೆಲೆ – ಇತ್ತ ಕಣ್ಣೀರಿಡುವಂತೆ ಮಾಡ್ತಿದೆ ಈರುಳ್ಳಿ ದರ
ರಾಯಚೂರು: ಒಂದ್ಕಡೆ ಟೊಮ್ಯಾಟೋ ದರ ಗ್ರಾಹಕರ ಜೇಬು ಸುಡುತ್ತಿದ್ರೆ, ಇನ್ನೊಂದ್ಕಡೆ ಈರುಳ್ಳಿ ದರ ರೈತರ ನಿದ್ದೆಗೆಡಿಸುವಂತೆ ಮಾಡಿದೆ. ಬಿಸಿಲನಾಡು ರಾಯಚೂರು ಜಿಲ್ಲೆಯ ರೈತರನ್ನ ಈರುಳ್ಳಿ ದರ ನಿಜಕ್ಕೂ ಕಣ್ಣೀರಿಡುವಂತೆ ಮಾಡಿದೆ. ರಾಯಚೂರು ಜಿಲ್ಲೆಯ ಈರುಳ್ಳಿ ಬೆಳೆಗಾರರ ಬದುಕು ಅಕ್ಷರಶಃ ಈ ಬಾರಿ…
ಸಿಎಂ ಕಾವೇರಿ ನಿವಾಸದ ಬಂದೋಬಸ್ತ್‌ಗೆ ಬಾರದ ಸಿಬ್ಬಂದಿ ಸೇರಿ ನಾಲ್ವರು ಪೊಲೀಸರು ಸಸ್ಪೆಂಡ್
ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಪೊಲೀಸರ ಕರ್ತವ್ಯಲೋಪ, ಅಕ್ರಮ ಚಟುವಟಿಕೆಗಳು ಹೆಚ್ಚಾಗ್ತಿದ್ದಂತೆ ಹಿರಿಯ ಅಧಿಕಾರಿಗಳು ಅದಕ್ಕೆ ಬ್ರೇಕ್ ಹಾಕುವ ಕೆಲಸ ಮಾಡ್ತಿದ್ದಾರೆ. ಇತ್ತೀಚೆಗಷ್ಟೇ ವಿವೇಕನಗರ ಪೊಲೀಸರ ವಿರುದ್ಧ ಕೇಳಿಬಂದಿದ್ದ ಲಾಕಪ್ ಡೆತ್ ಆರೋಪ ಸಂಬಂಧ ಠಾಣೆಯ ಇನ್ಸ್‌ಪೆಕ್ಟರ್ ಸೇರಿ ನಾಲ್ವರು ಸಿಬ್ಬಂದಿಯನ್ನ ಅಮಾನತು…
ಬೆಂಗಳೂರು ಏರ್ಪೋರ್ಟ್ನಲ್ಲಿ ಫ್ಲೈಟ್ಗಳು ಕ್ಯಾನ್ಸಲ್, ತುಂಬಿ ತುಳುಕಿದೆ ನಿಲ್ದಾಣ, ಪ್ರಯಾಣಿಕರ ಆಕ್ರೋಶ
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ಏರ್ಲೈನ್ಸ್ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗುತ್ತಿದೆ. ದಿಢೀರ್ ವಿಮಾನ ರದ್ದಾದ ಹಿನ್ನೆಲೆ ಜನರು ಪರದಾಡುವಂತಾಗಿದೆ. ನೂರಾರು ಜನರು ನಿಲ್ದಾಣದಲ್ಲೇ ಕಾದು ನಿಂತಿದ್ದು, ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರು, ದೆಹಲಿ, ಮುಂಬೈ, ಹೈದರಾಬಾದ್ ವಿಮಾನ…
