ನಟಿ ಪ್ರಿಯಾಂಕಾ ಉಪೇಂದ್ರ ಫೋನ್ ಹ್ಯಾಕ್ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಅರೆಸ್ಟ್!
ಬೆಂಗಳೂರು: ಕನ್ನಡದ ಹಿರಿಯ ನಟಿ ಪ್ರಿಯಾಂಕ ಉಪೇಂದ್ರ ಅವರ ಮೊಬೈಲ್ ಫೋನ್ ಹ್ಯಾಕ್ ಮಾಡಿ ಹಣ ವಂಚನೆ ಮಾಡಿದ ಆರೋಪಿಯನ್ನು ಬಂದಿಸಿದ್ದಾರೆ. ಆರೋಪಿ ಬಿಹಾರ ಮೂಲದ ಯುವಕನಾಗಿದ್ದು, ಸದಾಶಿವನಗರ ಪೊಲೀಸರು ಪತ್ತೆಹಚ್ಚಿ ಬಂಧಿಸಿದ್ದಾರೆ. ಈ ಘಟನೆಯಿಂದ ಕಂಗಾಲಾದ ಪ್ರಿಯಾಂಕ ಉಪೇಂದ್ರ ಅವರಿಗೆ…
ವಿಶೇಷ ಚೇತನ ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಬಿತ್ತು ಧರ್ಮದೇಟು
ಬೆಂಗಳೂರು: ಗಾಂಜಾ ನಶೆಯಲ್ಲಿದ್ದ ಕಾಮುಕನೊಬ್ಬ ವಿಶೇಷ ಚೇತನ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಅಮಾನವೀಯ ಘಟನೆ ಬೆಂಗಳೂರಿನ ಆಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಘ್ನೇಶ್ ಅಲಿಯಾಸ್ ದಾಡು ಎಂಬಾತನಿಂದ ಕೃತ್ಯ ನಡೆದಿದ್ದು, ಆರೋಪಿಯನ್ನು ಹಿಡಿದು ಥಳಿಸಿರುವ ಸ್ಥಳೀಯರು ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.…
ದೆಹಲಿ ಕೆಂಪು ಕೋಟೆ ಸ್ಫೋಟ ಪ್ರಕರಣದ ತನಿಖೆ ಎನ್ಐಎ ಹೆಗಲಿಗೆ
ನವದೆಹಲಿ: ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ನಿನ್ನೆ (ಸೋಮವಾರ) ಸಂಜೆ ನಡೆದ ಕಾರು ಸ್ಫೋಟ ಇಡೀ ದೇಶವನ್ನೇ ಬೆಚ್ಚಿಬೀಳಿಸಿತ್ತು. ಇದಾದ ನಂತರ ದೇಶಾದ್ಯಂತ ಹೈ ಅಲರ್ಟ್ ಘೋಷಿಸಲಾಗಿತ್ತು. ಈ ಘಟನೆಯ ತನಿಖೆಯ ಹೊಣೆಯನ್ನು ಎನ್ಐಎ (ರಾಷ್ಟ್ರೀಯ ತನಿಖಾ ಸಂಸ್ಥೆ)ಗೆ…
ದೆಹಲಿ ಬಾಂಬ್ ಸ್ಫೋಟ ಕೇಂದ್ರ, ದೆಹಲಿ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ: ಹರಿಪ್ರಸಾದ್
ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದಲ್ಲಿ ದೆಹಲಿಯಲ್ಲಿ ಕೇಂದ್ರ ಸರ್ಕಾರ ಮತ್ತು ಅಲ್ಲಿನ ರಾಜ್ಯ ಸರ್ಕಾರದ ಇಂಟಲಿಜೆನ್ಸ್ ವೈಫಲ್ಯ ಆಗಿದೆ ಎಂದು ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಕೇಂದ್ರ ಮತ್ತು ದೆಹಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದೆಹಲಿಯಲ್ಲಿ ಬಾಂಬ್ ಸ್ಫೋಟ ಪ್ರಕರಣದ…
ದೆಹಲಿ ಸ್ಫೋಟದ ಸಂಚುಕೋರರನ್ನು ಸುಮ್ಮನೆ ಬಿಡಲ್ಲ – ಭೂತಾನ್‌ನಲ್ಲಿ ಮೋದಿ ವಾರ್ನಿಂಗ್
ಥಿಂಪು: ದೆಹಲಿಯ ಕೆಂಪುಕೋಟೆ ಬಳಿ ನಡೆದ ಸ್ಫೋಟದ ಹಿಂದಿರುವ ಸಂಚುಕೋರರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾರ್ನಿಂಗ್ ಕೊಟ್ಟಿದ್ದಾರೆ. ದೆಹಲಿಯಲ್ಲಿ ನಡೆದ ಸ್ಫೋಟಕ್ಕೆ ಸಂಬಂಧಿಸಿದಂತೆ ಭೂತಾನ್‌ನಲ್ಲಿ ಮಾತನಾಡಿದ ಅವರು, ಇಂದು ನಾನು ತುಂಬಾ ಭಾರವಾದ ಹೃದಯದಿಂದ ಇಲ್ಲಿಗೆ ಬಂದಿದ್ದೇನೆ.…
ʻಫರಿದಾಬಾದ್ ಮಾಡ್ಯೂಲ್ʼ ಗ್ಯಾಂಗ್ ಅರೆಸ್ಟ್ ಆಗಿದ್ದಕ್ಕೆ ವೈದ್ಯ ಉಮರ್ ನಬಿಯಿಂದ ಕಾರು ಸ್ಫೋಟ!
ನವದೆಹಲಿ: ಕೆಂಪುಕೋಟೆ ಬಳಿ ಸ್ಫೋಟಗೊಂಡ ಐ20 ಕಾರಿನಲ್ಲಿ ಫರಿದಾಬಾದ್ ವೈದ್ಯ ಡಾ. ಉಮರ್ ಯು ನಬಿ ಸೂಸೈಡ್ ಬಾಂಬರ್ ಆಗಿ ಕೆಲಸ ಮಾಡಿರುವ ಶಂಕೆ ವ್ಯಕ್ತವಾಗಿದೆ. 2,900 ಕೆಜಿ ಸ್ಫೋಟಕ ಪತ್ತೆಯಾದ ಫರಿದಾಬಾದ್ ಮಾಡ್ಯೂಲ್ ಜೊತೆ ಸಂಬಂಧ ಹೊಂದಿದ್ದ ಪುಲ್ವಾಮಾ ಮೂಲದ…
ದೆಹಲಿ ಸ್ಫೋಟ ಬೆನ್ನಲ್ಲೇ ಕರ್ನಾಟಕದಲ್ಲೂ ಹೈಅಲರ್ಟ್; ಬೆಂಗಳೂರಲ್ಲಿ ಬಿಗಿ ಭದ್ರತೆ, ವಾಹನಗಳ ತಪಾಸಣೆ
ಬೆಂಗಳೂರು: ದೆಹಲಿಯಲ್ಲಿ ಕಾರು ಸ್ಫೋಟದ ಹಿನ್ನೆಲೆ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬಿಗ್ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ರಾತ್ರಿಯಿಡೀ ಖಾಕಿ ಕಟ್ಟೆಚ್ಚರ ವಹಿಸಿದೆ. ನಾಕಾಬಂದಿ ಹಾಕಿ ಪೊಲೀಸರು , ಪ್ರತಿಯೊಂದು ವಾಹನಗಳ ತಪಾಸಣೆ ನಡೆಸಿದ್ದಾರೆ. ವಿಮಾನ ನಿಲ್ದಾಣ, ಮೆಟ್ರೋ ಸ್ಟೇಷನ್, ಮಾಲ್ಗಳು…
ಬಾಲಿವುಡ್ ದಂತಕಥೆ ಧರ್ಮೇಂದ್ರ ನಿಧನ
ಮುಂಬೈ: ಬಾಲಿವುಡ್‌ನ ದಂತಕಥೆ ಹಿರಿಯ ನಟ ಧರ್ಮೇಂದ್ರ (89) ಇಂದು ಬೆಳಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಧರ್ಮೇಂದ್ರ ಅವರನ್ನು ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಐಸಿಯುನಲ್ಲಿದ್ದ ಅವರ ಸ್ಥಿತಿ ಗಂಭೀರವಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ.…
ದೆಹಲಿ ಸ್ಫೋಟದ ಐ20 ಕಾರಿಗೆ ಇದೆ ಪುಲ್ವಾಮಾ ನಂಟು!
ನವದೆಹಲಿ: ದೆಹಲಿ ಸ್ಫೋಟಕ್ಕೆ ಕಾರಣವಾದ ಕಾರು 2019 ರ ಪುಲ್ವಾಮಾ ದಾಳಿ ವೇಳೆ ಬಳಕೆಯಾದ ಕಾರಿನಂತೆ ಮಾರಾಟವಾಗಿರುವ ವಿಚಾರ ಈಗ ಬೆಳಕಿಗೆ ಬಂದಿದೆ. ಹೌದು. ಸ್ಫೋಟಕ್ಕೆ ಕಾರಣವಾದ ಐ20 ಕಾರಿನ ಮೂಲ ಮಾಲೀಕರನ್ನು ಪತ್ತೆ ಹಚ್ಚುವ ಕೆಲಸವನ್ನು ಪೊಲೀಸರು ಈಗ ಆರಂಭಿಸಿದ್ದಾರೆ.…
ಸ್ಫೋಟಕ್ಕೂ ಮೊದಲು 3 ಗಂಟೆ ಪಾರ್ಕ್ – ನಿರ್ಗಮಿಸಿದ ಕೆಲ ನಿಮಿಷದಲ್ಲಿ ಕಾರ್ ಬ್ಲಾಸ್ಟ್
ನವದೆಹಲಿ: ದೆಹಲಿಯ ಕೆಂಪು ಕೋಟೆ ಕಾರು ಸ್ಫೋಟದಲ್ಲಿ ಭಾಗಿಯಾಗಿರುವ ಹುಂಡೈ ಐ20 ಕಾರು ಸ್ಫೋಟಕ್ಕೂ ಮೊದಲು ಮೂರು ಗಂಟೆ ಪಾರ್ಕಿಂಗ್ ಆಗಿದ್ದ ವಿಚಾರ ಈಗ ಸಿಸಿಟಿವಿ ದೃಶ್ಯಗಳಿಂದ ಪತ್ತೆಯಾಗಿದೆ. ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ…
