ಅಯೋಧ್ಯೆ ರಾಮಮಂದಿರದ ಗರ್ಭಗುಡಿ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜ – ನ.25 ಕ್ಕೆ ಮೋದಿ ಧ್ವಜಾರೋಹಣ
ನವದೆಹಲಿ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಭವ್ಯ ರಾಮಮಂದಿರದ ಗರ್ಭಗುಡಿಯ ಮೇಲೆ 22 ಅಡಿ ಉದ್ದದ ಕೇಸರಿ ಧ್ವಜವನ್ನು ಹಾರಿಸಲು ತೀರ್ಮಾನಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದ ಮೇಲ್ಭಾಗದಲ್ಲಿ ಧ್ವಜಾರೋಹಣ ನಡೆಸಲಿದ್ದಾರೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ…
ಉತ್ತರ ಕರ್ನಾಟಕ ಪ್ರವಾಹ, ಬೆಳೆಹಾನಿ: ಪ್ರಧಾನಿ ಮೋದಿ, ಶಾ ಜತೆ ಕುಮಾರಸ್ವಾಮಿ ಚರ್ಚೆ
ಬೆಂಗಳೂರು: ಕಲ್ಯಾಣ ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಗಳಲ್ಲಿ ನಿರಂತರ ಮಳೆಯಿಂದಾಗಿ ರೈತರು ಭಾರೀ ಸಂಕಷ್ಟಕ್ಕೊಳಗಾಗಿದ್ದಾರೆ. ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಆರ್ಭಟದಿಂದ ಬೆಳೆಗಳು ನಾಶವಾಗಿದ್ದು, ರೈತರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಅವರು…
ಬೆಂಗಳೂರಿನಲ್ಲಿ ವಾಯುಮಾಲಿನ್ಯ ಹೆಚ್ಚಳಕ್ಕೆ ಅಚ್ಚರಿಯ ಕಾರಣ ಬಿಚ್ಚಿಟ್ಟ ಮಾಲಿನ್ಯ ನಿಯಂತ್ರಣ ಮಂಡಳಿ
ಬೆಂಗಳೂರು: ಬೆಂಗಳೂರಲ್ಲಿ ದಿನೇ ದಿನೇ ವಾಯುಮಾಲಿನ್ಯ ಹೆಚ್ಚಾಗುತ್ತಿದ್ದು, ಜನರ ಆರೋಗ್ಯಕ್ಕೆ ಕುತ್ತು ತರುವ ಸೂಚನೆ ನೀಡುತ್ತಿದೆ. ಈ ಮಧ್ಯೆ ಇಷ್ಟು ಹದಗೆಟ್ಟ ವಾತಾವರಣಕ್ಕೆ ಕಾರಣವೇನೆಂದು ಮಾಲಿನ್ಯ ನಿಯಂತ್ರಣ ಮಂಡಳಿ ತಿಳಿಸಿದೆ. ಕೇವಲ ವಾಹನದಿಂದ ಉತ್ಪತ್ತಿಯಾಗುವ ಕಲುಷಿತ ಹೊಗೆ, ಧೂಳಿನ ಕಣಗಳು ಮಾತ್ರವಲ್ಲದೇ…
ವಿಜಯಪುರ ಜಿಲ್ಲೆಯಲ್ಲಿ ನಡುಗಿದ ಭೂಮಿ! ಮನೆಯಿಂದ ಹೊರಗೆ ಓಡಿದ ಜನ!
ವಿಜಯಪುರ : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ ವಿಜಯಪುರ ಗ್ರಾಮೀಣ ಭಾಗದ 12 ಕಿ.ಮೀ ಸುತ್ತ ಮುತ್ತ ಭೂಕಂಪನದ ಅನುಭವವಾಗಿದ್ದು, ಭಾರೀ ಸದ್ದಿಗೆ ಜನರು ಭಯ ಭೀತರಾಗಿ ಮನೆಗಳಿಂದ ಹೊರಗೆ ಓಡಿದ್ದಾರೆ. ಭೂಮಿ ಕಂಪಿಸಿದ ಅನುಭವದ ಬಗ್ಗೆ ಜನರು…
ಅ. 13ಕ್ಕೆ ಔತಣಕೂಟ ಹಿನ್ನೆಲೆ ಆಪ್ತ ಸಚಿವರ ಜತೆ ಸಿದ್ದರಾಮಯ್ಯ ಚರ್ಚೆ
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅಕ್ಟೋಬರ್ 13ಕ್ಕೆ ಸಚಿವರಿಗೆ ಔತಣಕೂಟ ಏರ್ಪಡಿಸಿದ್ದಾರೆ. ಅಪರೂಪಕ್ಕೆ ಕರೆದಿರುವ ಈ ಔತಣಕೂಟ ಕೆಲ ಸಚಿವರ ಪಾಲಿಗೆ ಬೀಳ್ಗೊಡುಗೆ ಆಗಬಹುದು ಎಂಬ ಚರ್ಚೆ ಕಾಂಗ್ರೆಸ್‌ನಲ್ಲೇ ಜೋರಾಗಿ ನಡೆಯುತ್ತಿದೆ. ಯಾರ ಕುರ್ಚಿ ಉಳಿಯುತ್ತದೆ, ಯಾರ ಕುರ್ಚಿ ಹೋಗುತ್ತದೆ ಎಂಬ ಪ್ರಶ್ನೆ…
ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚನೆಗೆ ಸೂಚನೆ: ಡಿಕೆಶಿ
ಬೆಂಗಳೂರು: ಬಾಂಬೆ ಮಾದರಿಯಲ್ಲಿ ಕೊಳೆಗೇರಿ ಪ್ರದೇಶಗಳ ಪುನಶ್ಚೇತನಕ್ಕೆ ಸಮಿತಿ ರಚಿಸಲು ಡಿಸಿಎಂ ಡಿ.ಕೆ.ಶಿವಕುಮಾರ್ , ಜಿಬಿಎ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಬಿಎ ಸಭಾಂಗಣದಲ್ಲಿ ಶುಕ್ರವಾರ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸಮಿತಿಯ ಮೊದಲ ಸಭೆಯಲ್ಲಿ ಸಚಿವ ಜಮೀರ್ ಅಹ್ಮದ್ ಅವರು ಬೆಂಗಳೂರಿನಲ್ಲಿ…
6 ತಿಂಗಳ ಮಗುವಿಗೆ ಕೆಮ್ಮಿದ್ದರೆ ಎದೆಹಾಲುಣಿಸಿ, ಸಿರಪ್ ನೀಡಬೇಡಿ
ಬೆಂಗಳೂರು: ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 6 ಮಕ್ಕಳು ಸಾವನ್ನಪ್ಪಿದ ಬಳಿಕ, ಸಿರಪ್ ಬಳಕೆಗೆ ಆರೋಗ್ಯ ಇಲಾಖೆ ಗೈಡ್‌ಲೈನ್ಸ್ ಬಿಡುಗಡೆ ಮಾಡಿತ್ತು. ಈಗ ವೈದ್ಯಕೀಯ ಶಿಕ್ಷಣ ಇಲಾಖೆ ಕೂಡ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಹೆರಿಗೆ ಆಸ್ಪತ್ರೆಗಳಲ್ಲಿ ವೈದ್ಯರು, ಗರ್ಭಿಣಿಯರು ಹಾಗೂ ಬಾಣಂತಿಯರ…
ಬಿದ್ದು ಕಾಲು ಮುರಿದುಕೊಂಡ ಹಿರಿಯ ನಟ ಉಮೇಶ್
ಕನ್ನಡದ ಹಿರಿಯ ನಟ ಉಮೇಶ್ ವಯೋ ಸಹಜ ತೊಂದರೆಗಳಿಂದ ಬಳಲುತ್ತಿದ್ದಾರೆ. ಇಂಥಹ ಕಷ್ಟದ ಹೊತ್ತಲ್ಲೇ ಅವರು ಮನೆಯಲ್ಲೇ ಬಿದ್ದು ಕಾಲು ಮುರಿದುಕೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ ಮನೆಯಲ್ಲೇ ಜಾರಿ ಬಿದ್ದ ಉಮೇಶ್ ನೋವಿನಿಂದಾಗಿ ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಮುದ್ದಿನಪಾಳ್ಯದ ಖಾಸಗಿ ಆಸ್ಪತ್ರೆಗೆ…
ಟ್ರಾಫಿಕ್ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ: ಪ್ರಿಯಾಂಕ್ ಖರ್ಗೆ ವ್ಯಾಖ್ಯಾನ
ಬೆಂಗಳೂರು: ಟ್ರಾಫಿಕ್ ಸಮಸ್ಯೆ ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೊಸ ವ್ಯಾಖ್ಯಾನ ಕೊಟ್ಟಿದ್ದಾರೆ. Mobility Symposium 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನಸಂಖ್ಯೆಯ ಸುಮಾರು 75.5 ಪ್ರತಿಶತ ಜನರು ಕೆಲಸ…
ಮೇಲೆ ಕುಳಿತವನು ಆಟ ಆಡಿಸ್ತಾನೆ, ನಾವೆಲ್ಲ ಗೊಂಬೆಗಳು: ಲಕ್ಷ್ಮಣ ಸವದಿ
ಬೆಳಗಾವಿ: ನಮ್ಮ ಸಮಿತಿ ಸದಸ್ಯರ ಸಂಖ್ಯೆ ಒಂಬತ್ತಾಗುತ್ತೋ? ಹನ್ನೊಂದಾಗುತ್ತೋ? ಹದಿನೈದಾಗುತ್ತೋ ನೋಡೋಣ. ಮೇಲೆ ಕುಳಿತವನು ಆಟ ಆಡಿಸ್ತಾನೆ. ನಾವೆಲ್ಲ ಗೊಂಬೆಗಳು, ಹೇಳಿದಂತೆ ಆಟ ಆಡುತ್ತೇವೆ ಎಂದು ಮಾಜಿ ಡಿಸಿಎಂ, ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ. ಡಿಸಿಸಿ ಬ್ಯಾಂಕ್ ಚುನಾವಣೆ…